ಪಿಎಫ್ಐ ನಿಷೇಧಿಸಲು ಕೇಂದ್ರ ಇಂಗಿತ
Team Udayavani, Sep 12, 2017, 8:30 AM IST
ಹೊಸದಿಲ್ಲಿ: ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ರುದ್ರೇಶ್ ಹತ್ಯೆ, ಕೇರಳದಲ್ಲಿ ಪ್ರಾಧ್ಯಾಪಕ ಕೆ.ಟಿ.ಜೋಸೆಫ್ ಕೈ ಕಡಿದ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಕ್ಕೆ ಗುರಿಯಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮೇಲೆ ಕೇಂದ್ರ ನಿಷೇಧ ಹೇರುವ ಸಾಧ್ಯತೆ ಇದೆ. ಈ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕೇಂದ್ರ ಗೃಹ ಖಾತೆಗೆ ವರದಿ ಸಲ್ಲಿಸಿದೆ. ಉಗ್ರ ಶಿಬಿರ, ಬಾಂಬ್ ತಯಾರಿಕೆ ಮತ್ತಿತರ ನ್ಯಾಯ ಸಮ್ಮತವಲ್ಲದ ಚಟುವಟಿಕೆಗಳಲ್ಲಿ ಸಂಘಟನೆ ತೊಡಗಿಸಿ ಕೊಂಡಿದ್ದರಿಂದ ಇಂಥ ನಿಷೇಧ ಹೇರಬಹುದು ಎಂದು ವರದಿಯಲ್ಲಿ ಅಭಿಪ್ರಾಯಪಡಲಾಗಿದೆ. ಇದರ ಜತೆಗೆ ಇಸ್ಲಾ ಮಿಕ್ ಸ್ಟೇಟ್ ಅಲ್-ಹಿಂದಿ ಎಂಬ ಸಂಘಟನೆ ಜತೆಗೆ ಸೇರಿ ಕೊಂಡು ದಕ್ಷಿಣ ಭಾರತದಲ್ಲಿ ಉಗ್ರ ಕೃತ್ಯ ನಡೆಸಲು ಯೋಜನೆ ರೂಪಿಸಿದ ವಿಚಾರವೂ ಬೆಳಕಿಗೆ ಬಂದಿದೆ.
ಆದರೆ ಕೇಂದ್ರ ತನಿಖಾ ಸಂಸ್ಥೆ ವರದಿಯಲ್ಲಿ ಉಲ್ಲೇಖೀಸಿದಂಥ ಕೃತ್ಯಗಳಲ್ಲಿ ಭಾಗಿಯಾಗಿಲ್ಲವೆಂದು ಸಂಘಟನೆ ಈಗಾಗಲೇ ಹೇಳಿಕೊಂಡಿದೆ. ಈ ಬಗ್ಗೆ ಮಾತನಾಡಿರುವ ಕೇಂದ್ರ ಗೃಹ ಸಚಿವಾಲಯದ ಹಿರಿಯ ಅಧಿಕಾರಿ ಅದಕ್ಕೆಲ್ಲ ಸೂಕ್ತ ದಾಖಲೆಗಳು ಇವೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ