
ಉದ್ಯೋಗ ಖಾತ್ರಿ ಕೂಲಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ನಿರ್ಧಾರ
Team Udayavani, Mar 27, 2023, 7:25 AM IST

ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗ)ಯ ವೇತನ ಪರಿಷ್ಕರಣೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ.
ಏ.1ರಿಂದ ಅನ್ವಯವಾಗುವಂತೆ ಹೊಸ ವೇತನ ವ್ಯವಸ್ಥೆ ಜಾರಿಯಾಗಲಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ಮಾ.24ರಂದೇ ಅಧಿಸೂಚನೆ ಹೊರಡಿಸಿದೆ.
ಏಳು ರೂ.ಗಳಿಂದ 26 ರೂ.ಗಳ ವರೆಗೆ ವೇತನ ಏರಿಕೆಯಾಗಲಿದೆ. ಹರ್ಯಾಣದಲ್ಲಿ ದೈನಂದಿನ ವೇತನ 357 ರೂ.ಗಳಿದ್ದು, ಇತರೆ ರಾಜ್ಯಗಳಿಗೆ ಹೋಲಿಸಿದರೆ ಇಲ್ಲೇ ಅತಿ ಹೆಚ್ಚು ವೇತನ ನೀಡಲಾಗುತ್ತಿದೆ. ಮಧ್ಯಪ್ರದೇಶ ಮತ್ತು ಛತ್ತೀಸ್‌ಗಡದಲ್ಲಿ ಅತಿ ಕಡಿಮೆ ಅಂದರೆ 221 ರೂ. ಇವೆ.
2022-23ನೇ ಸಾಲಿನಲ್ಲಿ ರಾಜಸ್ಥಾನದಲ್ಲಿ ಮನರೇಗಾ ವ್ಯಾಪ್ತಿಯಲ್ಲಿ ವೇತನ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಕರ್ನಾಟಕ, ಗೋವಾ, ಮೇಘಾಲಯ, ಮಣಿಪುರಗಳಲ್ಲಿ ಶೇ.2ರಿಂದ ಶೇ.10ರವರೆಗೆ ಏರಿಕೆಯಾಗಿವೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
