ಚು. ಆಯುಕ್ತರ ಆಯ್ಕೆಗೆ ಕೊಲೀಜಿಯಂ: ಆಗ್ರಹ

Team Udayavani, Jun 8, 2019, 6:00 AM IST

ಕೋಲ್ಕತಾ: ನ್ಯಾಯಮೂರ್ತಿಗಳ ನೇಮಕಕ್ಕೆ ಇರುವ ಸಮಿತಿ (ಕೊಲೀಜಿಯಂ) ಮಾದರಿಯಲ್ಲೇ ಚುನಾವಣಾ ಆಯುಕ್ತರ ನೇಮಕಕ್ಕೂ ಪ್ರತ್ಯೇಕ ಸಮಿತಿ ಇರಬೇಕು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.

ಲೋಕಸಭೆ ಚುನಾವಣೆ ವೇಳೆ ಆಯೋಗ ಪಕ್ಷಪಾತ ಧೋರಣೆ ಅನುಸರಿಸಿತ್ತು ಎಂದು ಹರಿಹಾಯ್ದಿರುವ ಟಿಎಂಸಿ ನಾಯಕಿ, ಇವಿಎಂಗಳ ದುರುಪಯೋಗವಾಗಿದೆ ಎಂಬ ಆರೋಪಗಳ ಬಗ್ಗೆ ಸತ್ಯಶೋಧನಾ ಸಮಿತಿ ನೇಮಕವಾಗಬೇಕು ಎಂದು ಒತ್ತಾಯಿಸಿದ್ದಾರೆ. ಜತೆಗೆ, ಈ ಕುರಿತು ಕಾಂಗ್ರೆಸ್‌ ಜತೆಗೂ ಮಾತುಕತೆ ನಡೆಸುತ್ತೇನೆ ಎಂದಿದ್ದಾರೆ.

ನೀತಿ ಆಯೋಗದ ಸಭೆ ನಿರುಪಯುಕ್ತ: ಜು.15ರಂದು ನವದೆಹಲಿಯಲ್ಲಿ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸದೇ ಇರಲು ಮಮತಾ ಬ್ಯಾನರ್ಜಿ ನಿರ್ಧರಿಸಿದ್ದಾರೆ. ಆಯೋಗದ ಸಭೆ ನಿರುಪಯುಕ್ತ. ರಾಜ್ಯದ ಯೋಜನೆಗಳಿಗೆ ಬೆಂಬಲ ನೀಡಲು ಆಯೋಗಕ್ಕೆ ಅಧಿಕಾರವೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಈ ಮೂಲಕ ಚುನಾವಣಾ ಪ್ರಚಾರದ ವೇಳೆ ಶುರುವಾಗಿದ್ದ ಬಿಜೆಪಿ ಮತ್ತು ಟಿಎಂಸಿ ನಡುವಿನ ಕದನ ಮೋದಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕವೂ ಮುಂದುವರಿದಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ