Surat: ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ: ಸುಟ್ಟು ಕರಕಲಾದ 7 ಕಾರ್ಮಿಕರ ಶವ ಪತ್ತೆ
Team Udayavani, Nov 30, 2023, 2:54 PM IST
ಗುಜರಾತ್: ಸೂರತ್ನ ಈಥರ್ ಇಂಡಸ್ಟ್ರೀಸ್ನ ಉತ್ಪಾದನಾ ಸ್ಥಳದಲ್ಲಿ ಸಂಭವಿಸಿದ ಬೆಂಕಿ ಅವಘಡದ ಬಳಿಕ ಸುಮಾರು ಏಳು ಕಾರ್ಮಿಕರ ಶವಗಳನ್ನು ಹೊರತೆಗೆಯಲಾಗಿದ್ದು, ಇತರ 27 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಬುಧವಾರ ಮುಂಜಾನೆ ಈ ಘಟನೆ ನಡೆದಿದ್ದು, ಏಳು ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿತ್ತು. ಆ ಬಳಿಕ ರಕ್ಷಣಾ ತಂಡ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಗುರುವಾರ ಏಳು ದೇಹಗಳು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತ ದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಮುಂದುವರೆದಿದೆ ಎಂದು ಹೇಳಿದ್ದಾರೆ. ವರದಿಗಳ ಪ್ರಕಾರ, ರಾಸಾಯನಿಕ ಶೇಖರಣಾ ತೊಟ್ಟಿಯಲ್ಲಿ ಸ್ಫೋಟ ಸಂಭವಿಸಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬಂದಿದ್ದು ತನಿಖೆ ಬಳಿಕ ನಿಜವಾದ ಕಾರಣ ತಿಳಿದು ಬರಲಿದೆ ಎಂದು ಉಪ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಇದನ್ನೂ ಓದಿ: ಡಿಕೆಶಿಗೆ ಹೈಕೋರ್ಟ್ ರಿಲೀಫ್ ಕೊಟ್ಟಿಲ್ಲ, ಇವರೇ ತೆಗೆದುಕೊಂಡಿದ್ದಾರೆ: ಕುಮಾರಸ್ವಾಮಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್