ರಸ್ತೆ ಗುಂಡಿ ತಪ್ಪಿಸಲು ಹೋಗಿ ಸ್ಕಿಡ್ ಆದ ಸ್ಕೂಟಿ; ಲಾರಿ ಹರಿದು ಯುವತಿ ದಾರುಣ ಅಂತ್ಯ
Team Udayavani, Jan 4, 2023, 5:07 PM IST
ಚೆನ್ನೈ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಯುವತಿಯೊಬ್ಬಳು ಲಾರಿ ಅಡಿಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಚೆನ್ನೈನಲ್ಲಿ ನಡೆದಿದೆ.
ಶೋಭನಾ ( 22) ಮೃತ ಯುವತಿ. ಖಾಸಗಿ ಕಂಪೆನಿಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಶೋಭನಾ ಮುಂಜಾನೆ ತನ್ನ ಸಹೋದರನನ್ನು ದ್ವಿಚಕ್ರ ವಾಹನದಲ್ಲಿ ನೀಟ್ ಕೋಚಿಂಗ್ ತರಗತಿಗೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಮಧುರವಾಯಲ್ ರಸ್ತೆಯಲ್ಲಿರುವ ಹೊಂಡಗಳನ್ನು ತಪ್ಪಿಸಲು ಹೋಗುವಾಗ ವಾಹನದ ನಿಯಂತ್ರಣ ತಪ್ಪಿ, ಸ್ಕಿಡ್ ಆಗಿ ಕೆಳಕ್ಕೆ ಬಿದ್ದಿದ್ದಾರೆ.
ಕೆಳಕ್ಕೆ ಬಿದ್ದ ಶೋಭನಾ ಅವರ ಮೇಲೆ ವೇಗವಾಗಿ ಬರುತ್ತಿದ್ದ ಲಾರಿ ಹರಿದ ಪರಿಣಾಮ ಶೋಭನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಶೋಭನಾ ಅವರ ಸಹೋದರ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಮರಳನ್ನು ತುಂಬಿಸಿಕೊಂಡು ಬರುತ್ತಿದ್ದ ಲಾರಿ ಶೋಭನಾ ಅವರ ಹರಿದ ಬಳಿಕ ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ. ಆ ಬಳಿಕ ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿದ ಲಾರಿ ಚಾಲಕ ಮೋಹನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್