ಮದುವೆಯಲ್ಲಿ ತನ್ನ ಪತ್ನಿ ಜತೆ ಡ್ಯಾನ್ಸ್ ಮಾಡುತ್ತಿದ್ದ ಸಹೋದರರನ್ನೇ ಹತ್ಯೆಗೈದ ವ್ಯಕ್ತಿ
Team Udayavani, May 16, 2023, 8:53 AM IST
ಛತ್ತೀಸ್ ಗಢ: ವ್ಯಕ್ತಿಯೊಬ್ಬ ತನ್ನ ಇಬ್ಬರೂ ಸಹೋದರರನ್ನೇ ಹತ್ಯೆಗೈದಿರುವ ಘಟನೆ ಛತ್ತೀಸ್ಗಢದ ಕಬೀರಧಾಮ್ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.
ತಿನ್ಹಾ ಬೇಗ ಎಂಬ ವ್ಯಕ್ತಿಯ ಸಹೋದರರು ಮದುವೆ ಮನೆಯಲ್ಲಿ ಸಂಭ್ರಮದಲ್ಲಿ ನೃತ್ಯ ಮಾಡುತ್ತಿದ್ದರು. ಈ ವೇಳೆ ಅವರ ಪಕ್ಕದಲ್ಲಿ ತಿನ್ಹಾ ಬೇಗ ಪತ್ನಿಯೂ ಹಾಡೊಂದಕ್ಕೆ ಹೆಜ್ಜೆ ಹಾಕುತ್ತಿದ್ದರು. ತನ್ನ ಕಿರಿಯ ಸಹೋದರರು ತನ್ನ ಪತ್ನಿಯೊಂದಿಗೆ ನೃತ್ಯ ಮಾಡುತ್ತಿರುವುದನ್ನು ನೋಡಿದ ತಿನ್ಹಾ ಬೇಗ ಸಿಟ್ಟಿನಲ್ಲಿ ಸಹೋದರರ ಮೇಲೆ ಹಲೆಗೈದು ಹತ್ಯೆ ಮಾಡಿದ್ದಾನೆ. ಘಟನೆಯನ್ನು ತಡೆಯಲು ಬಂದ ಸಂಬಂಧಿಕರ ಮೇಲೂ ಹಲ್ಲೆಗೈದು ಗಂಭೀರ ಗಾಯಗೊಳಿಸಿದ್ದಾನೆ.
ಕುಡಿದ ಮತ್ತಿನಲ್ಲಿದ್ದ ತನ್ನ ಪತ್ನಿಯ ಮೇಲೆ ಹರಿತವಾದ ಆಯುಧದಿಂದ ಹಲ್ಲೆಗೈದಿದ್ದಾನೆ. ಇದನ್ನು ಮೊದಲು ತಡೆಯಲು ಬಂದ ಕಿರಿಯ ಸಹೋದರರನ್ನು ಕೊಲೆ ಮಾಡಿದ್ದಾನೆ ಎಂದು ವರದಿ ತಿಳಿಸಿದೆ.
ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು