ಆ.26ರವರೆಗೆ ಚಿದಂಬರಂ ಬಂಧಿಸಬೇಡಿ; ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂಕೋರ್ಟ್

Team Udayavani, Aug 23, 2019, 3:22 PM IST

ನವದೆಹಲಿ: ಕೇಂದ್ರ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ವಿರುದ್ಧ ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದರುವ ಹಣದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 26ರವರೆಗೆ ಬಂಧಿಸದಂತೆ ಸುಪ್ರೀಂಕೋರ್ಟ್ ಶುಕ್ರವಾರ ಆದೇಶ ನೀಡಿದೆ.

ಐಎನ್ ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದ ಸಿಬಿಐ ಮತ್ತು ಇ.ಡಿ. ಪ್ರಕರಣಗಳ ವಿಚಾರಣೆಯನ್ನು ಆಗಸ್ಟ್ 26ರಂದು ನಡೆಸುವುದಾಗಿ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ ಎಂದು ವರದಿ ತಿಳಿಸಿದೆ.

ಆದರೆ ಸಿಬಿಐ ಕಸ್ಟಡಿಗೆ ಸಂಬಂಧಿಸಿದಂತೆ ಮಧ್ಯಪ್ರವೇಶಿಸುವುದಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದ್ದು, ಈಗಾಗಲೇ ಸೋಮವಾರವಾರದವರೆಗೆ ಸಿಬಿಐ ಕೋರ್ಟ್ ಐದು ದಿನಗಳ ಕಾಲ ಕಸ್ಟಡಿ ವಿಧಿಸಿದೆ ಎಂದು ತಿಳಿಸಿದೆ.

ಚಿದಂಬರಂ ವಿರುದ್ಧ ಸಿಬಿಐ ಹಾಗೂ ಇ.ಡಿ. ದಾಖಲಿಸಿರುವ ಪ್ರಕರಣದ ಕುರಿತು ಸುಪ್ರೀಂಕೋರ್ಟ್ ನ ಜಸ್ಟೀಸ್ ಆರ್.ಭಾನುಮತಿ ಮತ್ತು ಜಸ್ಟೀಸ್ ಎಎಸ್ ಬೋಪಣ್ಣ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಆಗಸ್ಟ್ 26ರಂದು ವಿಚಾರಣೆ ನಡೆಸಲಿದೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ