ಶಿವರಾಜ್‌ ಚೌಹಾಣ್‌ ಸಂಪುಟಕ್ಕೆ ಸಿಂಧಿಯಾ ಪ್ರಭಾವಳಿ

28 ಸಚಿವರ ಪೈಕಿ 9 ಮಂದಿ ಸಿಂಧಿಯಾ ನಿಷ್ಠರು ; ಕೈ ತೊರೆದ 14 ಮಂದಿ ಪೈಕಿ 12 ಶಾಸಕರಿಗೆ ಸ್ಥಾನ

Team Udayavani, Jul 3, 2020, 6:05 AM IST

ಶಿವರಾಜ್‌ ಚೌಹಾಣ್‌ ಸಂಪುಟಕ್ಕೆ ಸಿಂಧಿಯಾ ಪ್ರಭಾವಳಿ

ಮಧ್ಯಪ್ರದೇಶದ ಹಂಗಾಮಿ ರಾಜ್ಯಪಾಲೆ ಆನಂದಿ ಬೆನ್‌ ಪಟೇಲ್‌ ರಾಜಭವನದಲ್ಲಿ ಬಿಜೆಪಿ ಶಾಸಕಿ ಯಶೋಧರ ರಾಜೇ ಸಿಂಧಿಯಾ ಅವರಿಗೆ ಸಚಿವ ಸ್ಥಾನದ ಪ್ರಮಾಣ ವಚನ ಬೋಧಿಸಿದರು. ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಇದ್ದಾರೆ.

ಭೋಪಾಲ್‌: ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಮೂರು ತಿಂಗಳ ಬಳಿಕ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಗುರುವಾರ ಸಂಪುಟ ವಿಸ್ತರಣೆ ಮಾಡಿ­ದ್ದಾರೆ.

28 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಪೈಕಿ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ 12 ಮಂದಿಗೆ ಅವಕಾಶ ಕಲ್ಪಿಸಲಾಗಿದ್ದರೆ, 16 ಮಂದಿ ಬಿಜೆಪಿಯ ಶಾಸಕರು ಸಚಿವರಾಗಿದ್ದಾರೆ.

ಮಧ್ಯಪ್ರದೇಶದ ರಾಜ್ಯಪಾಲ ಹುದ್ದೆಯ ಹೆಚ್ಚುವರಿ ಹೊಣೆ ಹೊತ್ತಿರುವ ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿ­ಬೆನ್‌ ಪಟೇಲ್‌ ರಾಜಭವನದಲ್ಲಿ ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. 12 ಮಂದಿಯ ಪೈಕಿ 9 ಮಂದಿ ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧಿಯಾ ನಿಷ್ಠರಾಗಿದ್ದಾರೆ.

ಇದಲ್ಲದೆ ಎಪ್ರಿಲ್‌ನಲ್ಲಿ ನಡೆದಿದ್ದ ಮೊದಲ ಹಂತದ ಸಂಪುಟ ವಿಸ್ತರಣೆಯಲ್ಲಿ ಇಬ್ಬರು ಸಿಂಧಿಯಾ ಬೆಂಬಲಿಗರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಹೀಗಾಗಿ, ಚೌಹಾಣ್‌ ಸಂಪುಟದಲ್ಲಿ 11 ಮಂದಿ ಗ್ವಾಲಿಯರ್‌ ರಾಜಮನೆತನದ ಕುಡಿಯ ಬೆಂಬ ಲಿಗರಿಗೆ ಸ್ಥಾನ ಸಿಕ್ಕಂತಾಗಿದೆ. ಹೀಗಾಗಿ, ಮಧ್ಯಪ್ರದೇಶ ಸಂಪುಟದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಪ್ರಭಾವಳಿ ಛಾಪು ಎದ್ದು ಕಾಣುತ್ತಿದೆ.

ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾಗಿರುವ 22 ಮಂದಿ ಪೈಕಿ 12 ಮಂದಿಗೆ ಸಚಿವ ಸ್ಥಾನ ಲಭಿಸಿದೆ. ಪ್ರಮಾಣ ವಚನ ಸ್ವೀಕರಿಸಿದ ಸಚಿವರ ಪೈಕಿ 20 ಮಂದಿ ಸಂಪುಟ ದರ್ಜೆ ಸಚಿವರು, ಎಂಟು ಮಂದಿ ಸಹಾಯಕ ಸಚಿವ ಸ್ಥಾನ ಪಡೆದಿದ್ದಾರೆ. ಈ ಪೈಕಿ ಆರು ಮಂದಿ ಕಮಲ್‌ನಾಥ್‌ ಸರಕಾರ ದಲ್ಲಿ ಸಚಿವರಾಗಿದ್ದರು. ಬಿಜೆಪಿಯಲ್ಲಿ ಹಿರಿಯ ನಾಯಕರು ಸೇರಿದಂತೆ ಹೊಸ ಮುಖಗಳಿಗೂ ಅವಕಾಶ ನೀಡಲಾಗಿದೆ. ಸಂಪುಟ ವಿಸ್ತರಣೆ ಬಳಿಕ ಚೌಹಾಣ್‌ ಸರಕಾರದಲ್ಲಿ 34 ಮಂದಿ ಸಚಿವರು ಸ್ಥಾನ ಪಡೆದಂತಾಗಿದೆ.

ಚುನಾವಣೆಯಲ್ಲಿ ಗೆಲ್ಲಬೇಕಾಗಿದೆ: 12 ಮಂದಿ ನೂತನ ಸಚಿವರು ಆರು ತಿಂಗಳ ಒಳಗಾಗಿ ಚುನಾವಣೆಯಲ್ಲಿ ಗೆಲ್ಲ ಬೇಕಾಗಿದೆ. ಈ ಪೈಕಿ ಆರು ಸಚಿವರು ಗ್ವಾಲಿಯರ್‌- ಚಂಬಲ್‌ ಪ್ರದೇಶದವರೇ ಆಗಿದ್ದಾರೆ. ಕುತೂಹಲಕಾರಿ ಅಂಶ ವೆಂದರೆ ಕಮಲ್‌ನಾಥ್‌ ನೇತೃತ್ವದ ಸರಕಾರಕ್ಕೆ ಬೆಂಬಲ ವಾಪಸ್‌ ಪಡೆದಿದ್ದ 22 ಮಂದಿ ಶಾಸಕರ ಪೈಕಿ 16 ಸ್ಥಾನಗಳು ಈ ಪ್ರದೇಶದ್ದೇ ಆಗಿವೆ.

ಪ್ರಮುಖರು ಯಾರು?: ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧಿಯಾ ತಮ್ಮ ಸಂಬಂಧಿ ಯಶೋಧರಾ ರಾಜೇ ಸಿಂಧಿಯಾಗೆ ಸಂಪುಟ ದರ್ಜೆ ಸ್ಥಾನ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿ ಶಾಸಕ ಗೋಪಾಲ ಭಾರ್ಗವ ಗುರುವಾರ ಪ್ರಮಾಣ ಸ್ವೀಕರಿಸಿದವರಲ್ಲಿ ಪ್ರಮುಖರು.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.