ಸ್ಥಳೀಯ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣಿಸಲು ಅನುಮತಿ ಇಲ್ಲ: ರೈಲ್ವೇ ಆಡಳಿತ

Team Udayavani, Nov 30, 2020, 6:00 AM IST

ಸ್ಥಳೀಯ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣಿಸಲು ಅನುಮತಿ ಇಲ್ಲ: ರೈಲ್ವೇ ಆಡಳಿತ

ಮುಂಬಯಿ: ಇಲ್ಲಿನ ಸ್ಥಳೀಯ ರೈಲುಗಳಲ್ಲಿ ಮಹಿಳೆಯರು ತಮ್ಮ ಮಕ್ಕಳೊಂದಿಗೆ ಪ್ರಯಾಣಿಸುತ್ತಿರುವುದನ್ನು ಗಮನಿಸಿದ ರೈಲ್ವೇ ಆಡಳಿತವು ಮಕ್ಕಳಿಗೆ ಲೋಕಲ್‌ ರೈಲುಗ‌ಳಲ್ಲಿ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದೆ.

ಕೊವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತು ಜನಸಂದಣಿಯನ್ನು ನಿಯಂತ್ರಿಸುವ ಉದ್ಧೇಶದಿಂದ ಸ್ಥಳೀಯ ರೈಲುಗಳಲ್ಲಿ ಸಾರ್ವಜನಿಕರಿಗೆ ಪ್ರಯಾಣಿಸಲು ಅನುಮತಿ ನೀಡಿಲ್ಲ. ಆದರೂ ಕೆಲಸಕ್ಕೆ ಹೋಗುವ ಮಹಿಳೆಯರಿಗೆ  ಅನೂಕೂಲಕ್ಕಾಗಿ ಸ್ಥಳೀಯ ರೈಲುಗಳಲ್ಲಿ ನಿರ್ದಿಷ್ಟ ಅವಧಿಯಲ್ಲಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ. ಆದರೆ ಅನೇಕ ಮಹಿಳೆಯರು ಮಕ್ಕಳೊಂದಿಗೆ ಪ್ರಯಾಣಿಸುವುದರಿಂದ ಸ್ಥಳೀಯ ಜನಸಂದಣಿ ಹೆಚ್ಚಾಗಿದೆ.  ಇದರಿಂದ ತಡ ರಾತ್ರಿಯವರೆಗೆ ಮಹಿಳೆಯರ ಬೋಗಿಗಳಲ್ಲಿ ದಟ್ಟನೆಯು ಹೆಚ್ಚಾಗಿವೆ. ಈ ದಟ್ಟಣೆಯನ್ನು ತಪ್ಪಿಸಲು ರೈಲ್ವೆ ಇಲಾಖೆ ಈ ಕಠಿಣ ಕ್ರಮ ಕೈಗೊಂಡಿದೆ.

ಲಾಕ್‌ಡೌನ್‌ ಅವಧಿಯಲ್ಲಿ  ಪೊಲೀಸ್‌, ವೈದ್ಯಕೀಯ ಸಿಬ್ಬಂದಿ, ಪುರಸಭೆ ಮತ್ತು ಸರಕಾರಿ ನೌಕರರಿಗೆ ಮಾತ್ರ ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸಲು ಅವಕಾಶವಿತ್ತು. ಅನಂತರ ರಾಜ್ಯ ಸರಕಾರ ಮತ್ತು ರೈಲ್ವೆ ಆಡಳಿತವು ಕ್ರಮೇಣ ವಿವಿಧ ವರ್ಗದ ಉದ್ಯೋಗಿಗಳಿಗೆ ಸ್ಥಳೀಯವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿತು. ಅದರಲ್ಲಿ, ಎಲ್ಲಾ ಮಹಿಳೆಯರಿಗೆ ಅಕ್ಟೋಬರ್‌ 21 ರಿಂದ ನಿಗದಿತ ಸಮಯದಲ್ಲಿ ಸ್ಥಳೀಯವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿತ್ತು.

ಅಗತ್ಯ ಸೇವೆಗಳಲ್ಲಿ ಮಹಿಳಾ ಉದ್ಯೋಗಿಗಳನ್ನು ಹೊರತುಪಡಿಸಿ ಮಹಿಳೆಯರಿಗೆ ಬೆಳಗ್ಗೆ 11.00 ರಿಂದ ಮಧ್ಯಾಹ್ನ 3.00 ರವರೆಗೆ ಮತ್ತು ಸಂಜೆ 7.00 ರ ನಂತರ ಪ್ರಯಾಣಿಸಲು ಸರಕಾರ ಅವಕಾಶ ನೀಡಿದೆ. ಆದರೆ ಕೆಲವು ಮಹಿಳೆಯರು ಶಾಪಿಂಗ್‌ ಅಥವಾ ಸಂಬಂಧದಿಕರನ್ನು ಭೇಟಿ ಮಾಡುವ ಸಲುವಾಗಿ ತಮ್ಮ ಮಕ್ಕಳೊಂದಿಗೆ ಪ್ರಯಾಣಿಸುತ್ತಿರುವುದು ಕಂಡುಬರುತ್ತದೆ.

ಕೋವಿಡ್-19 ಅವಧಿಯಲ್ಲಿ ಮಹಿಳೆಯರು ಅನಗತ್ಯವಾಗಿ ಮಕ್ಕಳೊಂದಿಗೆ ಪ್ರಯಾಣಿಸುವುದರಿಂದ ಅಪಾಯವು ಹೆಚ್ಚಾಗುವ ಸಾಧ್ಯತೆಯಿದೆ ಎಂದು ರೈಲ್ವೆ ಆಡಳಿತ ತಿಳಿಸಿದೆ.

ಟಾಪ್ ನ್ಯೂಸ್

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.