AI ಬಳಸಿ ಲೋಕಸಭೆ ಚುನಾವಣೆ ಮೇಲೆ ಚೀನಾ ಪ್ರಭಾವ: ಮೈಕ್ರೋಸಾಫ್ಟ್ ಎಚ್ಚರಿಕೆ


Team Udayavani, Apr 6, 2024, 1:07 PM IST

China may Influences Lok Sabha Elections Using AI: Microsoft Warns

ಹೊಸದಿಲ್ಲಿ: ಪ್ರಪಂಚದ ಅತಿದೊಡ್ಡ ಗಣರಾಜ್ಯವಾದ ಭಾರತದಲ್ಲಿ ಇನ್ನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಏಳು ಹಂತಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನವು ಎಪ್ರಿಲ್ 26ರಂದು ನಡೆಯಲಿದೆ. ಎಲ್ಲಾ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದೆ. ಇದೇ ವೇಳೆ ಆತಂಕಕಾರಿ ವಿಚಾರವೊಂದನ್ನು ಟೆಕ್ ದೈತ್ಯ ಮೈಕ್ರೊಸಾಫ್ಟ್ ನ ವರದಿಯು ಬಯಲು ಮಾಡಿದೆ. ಅದುವೇ ನೆರೆ ರಾಷ್ಟ್ರ ಚೀನಾವು ಎಐ (AI) ತಂತ್ರಜ್ಞಾನವನ್ನು ಬಳಸಿ ಲೋಕಸಭೆ ಚುನಾವಣೆಯಲ್ಲಿ ಹಸ್ತಕ್ಷೇಪ ನಡೆಸಬಹುದು ಎಂಬ ವರದಿ.

ಅಮೆರಿಕ ಮತ್ತು ದಕ್ಷಿಣ ಕೊರಿಯಾದಂತಹ ದೇಶಗಳ ಚುನಾವಣೆಯಲ್ಲಿಯೂ ಚೀನಾ ಎಐ ಪ್ರಭಾವ ಬೀರಲಿದೆ ಎಂದು ವರದಿ ತಿಳಿಸಿದೆ.

ಮೈಕ್ರೋಸಾಫ್ಟ್ ಪ್ರಕಾರ, ಚೀನಾ ಪ್ರಮುಖ ಚುನಾವಣೆಗಳಲ್ಲಿ ಸಾರ್ವಜನಿಕ ಅಭಿಪ್ರಾಯವನ್ನು ತನ್ನ ಪರವಾಗಿ ತಿರುಗಿಸಲು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಎಐ- ರಚಿತವಾದ ವಿಷಯವನ್ನು ಉತ್ಪಾದಿಸುವ ಮತ್ತು ವಿತರಿಸುವ ಸಾಧ್ಯತೆಯಿದೆ.

ಚೀನಾವನ್ನು ಬೆಂಬಲಿಸುವ ಗುರಿ ಹೊಂದಿರುವ ಮೀಮ್ ಗಳು, ವಿಡಿಯೋ- ಆಡಿಯೋಗಳ ಮಾದರಿಯಲ್ಲಿ ಕಂಟೆಂಟ್ ಗಳು ಇರಲಿದೆ. ಆದರೂ, ಈ ವಿಷಯಗಳಿಂದ ಸಾರ್ವತ್ರಿಕ ಚುನಾವಣೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಕಡಿಮೆ ಎಂದು ಅದು ಹೇಳಿದೆ.

ಮೈಕ್ರೋಸಾಫ್ಟ್‌ನ ‘Same targets, new playbooks: East Asia threat actors employ unique methods’ ವರದಿಯಲ್ಲಿ ಜೂನ್ 2023 ರಿಂದ ಚೀನಾ ಮತ್ತು ಉತ್ತರ ಕೊರಿಯಾದಿಂದ ಗಮನಾರ್ಹ ಸೈಬರ್ ಮತ್ತು ಇನ್ಫ್ಲುಯೆನ್ಸ್ ಪ್ರವೃತ್ತಿಯ ಬಗ್ಗೆ ವಿವರ ನೀಡಲಾಗಿದೆ.

ದಕ್ಷಿಣ ಪೆಸಿಫಿಕ್ ದ್ವೀಪಗಳಲ್ಲಿನ ದೇಶಗಳು, ದಕ್ಷಿಣ ಚೀನಾ ಸಮುದ್ರ ಪ್ರದೇಶದಲ್ಲಿನ ಪ್ರಾದೇಶಿಕ ವಿರೋಧಿಗಳು ಮತ್ತು ಯು.ಎಸ್ ರಕ್ಷಣಾ ಕೈಗಾರಿಕಾ ನೆಲೆಯನ್ನು ಒಳಗೊಂಡಂತೆ ಟಾರ್ಗೆಟ್ ಪ್ರದೇಶಗಳ ಮೇಲೆ ಪ್ರಭಾವ ಬೀರುವ ಪ್ರಯತ್ನಗಳ ಉಲ್ಬಣವನ್ನು ಸೂಚಿಸುತ್ತವೆ.

ಎಐ ರಚಿತ ಕಂಟೆಂಟ್ ಗಳ ಮೂಲಕ ಚೀನಾ ಪ್ರಭಾವಿ ಅಭಿಯಾನಗಳು ಹೆಚ್ಚುತ್ತಿದೆ. ಸಾರ್ವಜನಿಕ ಅಭಿಪ್ರಾಯಗಳ ಮೇಲೆ ಪ್ರಭಾವ ಬೀರಲು ಈ ವಿಚಾರಗಳನ್ನು ಹೆಚ್ಚು ಆಧುನಿಕವಾಗಿ ವ್ಯವಸ್ಥಿತವಾಗಿ ಮಾಡಲಾಗುತ್ತಿದೆ ಎಂದು ಮೈಕ್ರೋಸಾಫ್ಟ್ ವರದಿ ಹೇಳಿದೆ.

ವರದಿಯು ಫ್ಲಾಕ್ಸ್ ಟೈಫೂನ್ ಎಂದು ಕರೆಯಲ್ಪಡುವ ಚೀನಾದ ಸೈಬರ್ ಚಟುವಟಿಕೆಯನ್ನು ಚರ್ಚಿಸಿದೆ. ಇದು 2023 ರಲ್ಲಿ ಯುಎಸ್-ಫಿಲಿಪೈನ್ಸ್ ಮಿಲಿಟರಿ ಅಭ್ಯಾಸಗಳಿಗೆ ಸಂಬಂಧಿಸಿದ ಘಟಕಗಳನ್ನು ಗುರಿಯಾಗಿರಿಸಿಕೊಂಡಿದೆ. ಈ ಸೈಬರ್ ಚಟುವಟಿಕೆಯು ಫಿಲಿಪೈನ್ಸ್, ಹಾಂಗ್ ಕಾಂಗ್, ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್‌ನ ಟಾರ್ಗೆಟ್ ಘಟಕಗಳಿಗೆ ಸಹ ಸಂಪರ್ಕ ಹೊಂದಿದೆ ಎಂದು ವರದಿ ಹೇಳಿದೆ.

ಟಾಪ್ ನ್ಯೂಸ್

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.