ಜೇಟ್ಲಿ ಪುತ್ರಿಗೆ ಲಂಚ ಕೊಟ್ಟ ಚೋಸ್ಕಿ: ರಾಹುಲ್ ಟೀಕೆ
Team Udayavani, Oct 23, 2018, 6:00 AM IST
ಹೊಸದಿಲ್ಲಿ: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಪುತ್ರಿ ಹೆಸರು ಪಿಎನ್‌ಬಿ ಹಗರಣದ ಆರೋಪಿ ಮೆಹುಲ್ ಚೋಸ್ಕಿಯ ಪಾವತಿ ಪಟ್ಟಿಯಲ್ಲಿ ಕಂಡು ಬಂದಿದೆ. ಹೀಗಾಗಿ ಜೇಟ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಜೇಟ್ಲಿ ಪುತ್ರಿಗೆ ಹಣ ಪಾವತಿಯಾಗುತ್ತಿತ್ತು ಎಂದು ಹೇಳಲಾಗಿರುವ ಖಾಸಗಿ ಬ್ಯಾಂಕ್‌ನ ಖಾತೆ ಸಂಖ್ಯೆಯನ್ನೂ ನೀಡಿದ್ದಾರೆ. ಹೀಗಾಗಿಯೇ ಚೋಸ್ಕಿ ವಿರುದ್ಧ ಯಾವುದೇ ಕ್ರಮಕ್ಕೆ ಅವಕಾಶ ಕೊಡದೆ ಪರಾರಿಯಾಗಲು ಅನುಕೂಲ ಕಲ್ಪಿಸಲಾಗಿದೆ ಎಂದು ದೂರಿದ್ದಾರೆ.
ಇದೇ ವೇಳೆ ಜೇಟ್ಲಿ ಪುತ್ರಿ- ಅಳಿಯ ಪಿಎನ್‌ಬಿಗೆ ವಂಚಿಸಿದ ಮೆಹುಲ್ ಚೋಸ್ಕಿಯಿಂದ 24 ಲಕ್ಷ ರೂ. ಸ್ವೀಕರಿಸಿದ್ದಾರೆ. ಈ ಮೂಲಕ ವಂಚಕರಿಗೆ ನೆರವಾಗಿದ್ದಾರೆ. ಜನವರಿಯಿಂದ ಇಲ್ಲಿಯವರೆಗೆ 19 ಸಾವಿರ ಬ್ಯಾಂಕ್ ವಂಚನೆ ಪ್ರಕರಣಗಳಿಂದ 90 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ