ಅಸ್ಸಾಂನಲ್ಲಿ ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ; ಉಪವಾಸ ಸತ್ಯಾಗ್ರಹಕ್ಕೆ ಎಎಎಸ್ ಯು ಕರೆ

Team Udayavani, Dec 13, 2019, 11:16 AM IST

ನವದೆಹಲಿ: ಅಸ್ಸಾಂನ ಗುವಾಹಟಿ ಮತ್ತು ದಿಬ್ರುಗಢದಲ್ಲಿ ಅನಿರ್ದಿಷ್ಟಾವಧಿವರೆಗೆ ಜಾರಿಗೊಳಿಸಿದ್ದ ಕರ್ಫ್ಯೂವನ್ನು ಶುಕ್ರವಾರ ಬೆಳಗ್ಗೆ 8ರಿಂದ 1ಗಂಟೆವರೆಗೆ ಸಡಿಸಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆ 2019 ಅನ್ನು ವಿರೋಧಿಸಿ ಅಸ್ಸಾಂನಲ್ಲಿ ತೀವ್ರ ಪ್ರತಿಭಟನೆ ನಡೆಯುತ್ತಿದೆ. ಇದೀಗ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಕೆಲಗಂಟೆಗಳ ಕಾಲ ಕರ್ಫ್ಯೂ ಸಡಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಮತ್ತೊಂದೆಡೆ ಕೇಂದ್ರದ ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಆಲ್ ಇಂಡಿಯಾ ಸ್ಟೂಡೆಂಟ್ಸ್ ಯೂನಿಯನ್ ಉಪವಾಸ ಸತ್ಯಾಗ್ರಹ ನಡೆಸಲು ಕರೆ ನೀಡಿದೆ. ದಿಬ್ರುಗಢದಲ್ಲಿ 24ಗಂಟೆಗಳ ಕಾಲದ ಕರ್ಫ್ಯೂವನ್ನು  48 ಗಂಟೆಗೆ ವಿಸ್ತರಿಸಿದ ನಂತರ ಈ ಬೆಳವಣಿಗೆ ನಡೆದಿದೆ ಎಂದು ವರದಿ ವಿವರಿಸಿದೆ.

ಅಸ್ಸಾಂನ ಲಾಖಿಂಪುರ್, ಟಿನ್ ಸುಕೀಯಾ, ಧೇಮಾಜಿ, ದಿಬ್ರುಗಢ್, ಚಾರಾಯಿಡೆವೊ, ಸಿವಸಾಗರ್, ಜೋಹ್ರಾತ್, ಗೋಲಾಘಾಟ್, ಕಾಮ್ರಾಪ್ (ಮೆಟ್ರೋ) ಮತ್ತು ಕಾಮ್ರಾಪ್ ಜಿಲ್ಲೆಗಳಲ್ಲಿ 48ಗಂಟೆಗಳ ಕಾಲ ಮೊಬೈಲ್, ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ