ಸಿಎಎ ಕಾಯ್ದೆ ಪೌರತ್ವವನ್ನು ಕಿತ್ತುಕೊಳ್ಳುವುದಿಲ್ಲ, ಬದಲಾಗಿ ಪೌರತ್ವ ನೀಡುತ್ತದೆ: ಮೋದಿ

Team Udayavani, Jan 12, 2020, 12:23 PM IST

modi

ಕೊಲ್ಕತ್ತಾ: ಪೌರತ್ವ ತಿದ್ದುಪಡಿ ಕಾಯ್ದೆ ನಿಮ್ಮ ಪೌರತ್ವ ಕಿತ್ತುಕೊಳ್ಳುವುದಿಲ್ಲ. ಬದಲಾಗಿ ಪೌರತ್ವ ನೀಡುವುದು  ಎಂದು ಪ್ರಧಾನಿ ನರೇಂದ್ರ ಮೋದಿ ಪುನರುಚ್ಚರಿಸಿದ್ದಾರೆ.

ಇಂದು ಕೊಲ್ಕತ್ತಾದ ರಾಮಕೃಷ್ಣ ಮಿಷನ್​ ಮುಖ್ಯಕಚೇರಿ ಬೇಲೂರು ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಪೌರತ್ವ ತಿದ್ದುಪಡಿ  ಕಾಯ್ದೆಯನ್ನು ರಾತ್ರಿ ಹಗಲಾಗುವುದರೊಳಗೆ ಜಾರಿಗೆ ತರಲಿಲ್ಲ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಂಡಿಸಿ, ಚರ್ಚೆ ನಡೆಸಿ ಸದಸ್ಯರ ಅಂಗೀಕಾರ ಸಿಕ್ಕಿದ ಮೇಲೆಯೇ ಜಾರಿಯಾಗಿದ್ದು. ಇದರ ಬಗ್ಗೆ ಯುವಕರಿಗೆ ತಪ್ಪು ಮಾಹಿತಿ ನೀಡಿ ದಾರಿತಪ್ಪಿಸಲಾಗುತ್ತಿದೆ. ಯುವಜನತೆಗೆ ಇದನ್ನು ಅರ್ಥ ಮಾಡಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.

ಸಿಎಎಯಿಂದಾಗಿ ಜನರಿಗೆ ಇಂದು ಪಾಕಿಸ್ತಾನ, ಬಾಂಗ್ಲಾದೇಶ, ಆಫ್ಘಾನಿಸ್ತಾನಗಳ ಧಾರ್ಮಿಕ ಅಲ್ಪಸಂಖ್ಯಾತರು ಎದುರಿಸುತ್ತಿರುವ ಕಿರುಕುಳದ ಬಗ್ಗೆ ಅರಿವಾಗುತ್ತಿದೆ. ಹೀಗಿರುವಾಗ ವಿರೋಧ ಪಕ್ಷಗಳ ನಾಯಕರು ರಾಜಕೀಯ ಲಾಭಕ್ಕಾಗಿ ಕಾಯ್ದೆಯನ್ನು ವಿರೋಧಿಸುತ್ತಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ ನಂತರ ಮಹಾತ್ಮಾ ಗಾಂಧಿ ಮತ್ತು ಇತರ ನಾಯಕರು ಪಾಕಿಸ್ತಾನದಲ್ಲಿ ಧಾರ್ಮಿಕ ಕಿರುಕುಳಕ್ಕೆ ಒಳಗಾಗುವ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡಬೇಕೆಂದೇ ಪ್ರತಿಪಾದಿಸಿದ್ದರು ಎಂದು ತಿಳಿಸಿದರು.

ಕಾಯ್ದೆಯನ್ನು ನೀವು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಿ. ಆದರೆ, ಇದರಲ್ಲಿ ರಾಜಕೀಯ ಆಟವನ್ನು ಆಡುತ್ತಿರುವವರು ಅರ್ಥ ಮಾಡಿಕೊಳ್ಳುವುದನ್ನು ಉದ್ದೇಶಪೂರ್ವಕವಾಗಿ ನಿರಾಕರಿಸುತ್ತಿದ್ದಾರೆ. ಕಾಯ್ದೆ ಬಗ್ಗೆ ಎಲ್ಲೆಡೆ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾವು ಯಾವಾಗಲೂ ಸ್ವಾಮಿ ವಿವೇಕಾನಂದ ಅವರನ್ನು ಸ್ಮರಿಸಬೇಕು. ನನಗೆ ನೂರು ಉತ್ಸಾಹಿ ಯವಕರನ್ನು ಕೊಡಿ ನಾನು ಖಂಡಿತವಾಗಿ ಭಾರತದ ಸುಧಾರಣೆ ಮಾಡುತ್ತೇನೆಂಬ ಅವರ ಅಪ್ರತಿಮ ಹೇಳಿಕೆಯನ್ನು ಸದಾ ಗಮನದಲ್ಲಿಟ್ಟುಕೊಳ್ಳಬೇಕು. ಕೆಲವೊಂದು ಒಳ್ಳೆಯ ಕೆಲಸವನ್ನು ಮಾಡುವಾಗ ನಮ್ಮ ಶಕ್ತಿ ಮತ್ತು ಒಳ್ಳೆಯ ಮನೋಭಾವ ಕೆಲಸದಲ್ಲಿ ಬದಲಾವಣೆ ಕಾಣಲು ತುಂಬಾ ಅವಶ್ಯಕ ಎಂದು ಪ್ರಧಾನಿ ತಿಳಿಸಿದರು.

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.