ಕೋವಿಡ್ ಎಫೆಕ್ಟ್ : ಯುಪಿಎಸ್ಸಿ ನೇಮಕಾತಿ ಸಂದರ್ಶನ ಮುಂದೂಡಿಕೆ
Team Udayavani, Apr 19, 2021, 9:29 PM IST
ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳು ಏರುಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆ ಈಗಾಗಲೇ ಸಿಬಿಎಸ್ 10th ಪರೀಕ್ಷೆ ಮುಂದೂಡಲಾಗಿದೆ. NEET ಹಾಗೂ JEE ಪರೀಕ್ಷೆಗಳು ಮುಂದೂಡಲ್ಪಟ್ಟಿವೆ. ಇದೀಗ ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್ಸಿ) 2020ರ ಸಾಲಿಗೆ ಕೇಂದ್ರ ಆಡಳಿತಾತ್ಮಕ ಸೇವೆ ಹುದ್ದೆಗಳಿಗೆ ನಡೆಯಬೇಕಿದ್ದ ಸಂದರ್ಶನಗಳನ್ನು ಮುಂದಕ್ಕೆ ಹಾಕಿದೆ.
ಸೋಮವಾರ ಈ ಬಗ್ಗೆ ಪ್ರಕಟನೆ ಹೊರಡಿಸಿರುವ ಯುಪಿಎಸ್ಸಿ, ‘ಸಂದರ್ಶನ ಮತ್ತು ನೇಮಕಾತಿ ಪರೀಕ್ಷೆಗಳು, ಅಭ್ಯರ್ಥಿಗಳು ದೇಶದ ವಿವಿಧೆಡೆಯಿಂದ ಯಾವಾಗ ಬರಬೇಕು ಎಂಬುದನ್ನು ಕಾಲಕಾಲಕ್ಕೆ ಪರಿಸ್ಥಿತಿ ಅವಲೋಕಿಸಿ ತೀರ್ಮಾನಿಸಲಾಗುವುದು. ಪರಿಷ್ಕೃತ ದಿನಾಂಕ ಕುರಿತು ಅಭ್ಯರ್ಥಿಗಳಿಗೆ 15 ದಿನ ಮೊದಲೇ ಯುಪಿಎಸ್ಸಿ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದೆ.
ಇನ್ನು ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಗೆ (ಇಒ/ಎಒ) ಹುದ್ದೆಗಳಿಗೆ ಮೇ 9ರಂದು ನಡೆಯಬೇಕಿದ್ದ ನೇಮಕಾತಿ ಪರೀಕ್ಷೆಯನ್ನು ಈಗಿನ ಸ್ಥಿತಿಯ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದೂ ಹೇಳಿಕೆಯು ತಿಳಿಸಿದೆ.ಕೇಂದ್ರ ಆಡಳಿತಾತ್ಮಕ ಸೇವೆಯ (ಐಎಎಸ್., ಐಪಿಎಸ್, ಮತ್ತು ಐಎಫ್ಎಸ್) ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ಯುಪಿಎಸ್ಸಿ ಮೂರು ಹಂತಗಳಲ್ಲಿ ಅಂದರೆ ಪ್ರಿಲಿಮಿನರಿ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ