
ನಿವೃತ್ತಿಗೂ ಮುನ್ನ ಅಯೋಧ್ಯೆ ತೀರ್ಪು ಪ್ರಕಟ; ವಿದೇಶ ಪ್ರವಾಸ ರದ್ದುಗೊಳಿಸಿದ ಸಿಜೆಐ
Team Udayavani, Oct 16, 2019, 12:12 PM IST

ನವದೆಹಲಿ: ರಾಮ ಜನ್ಮಭೂಮಿ ಹಾಗೂ ಬಾಬ್ರಿ ಮಸೀದಿ ವಿವಾದ ಪ್ರಕರಣದ ಅಂತಿಮ ತೀರ್ಪನ್ನು ನಿವೃತ್ತಿಯಾಗುವ ಮೊದಲೇ ಘೋಷಿಸುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯಿ ಅವರು ಅಧಿಕೃತ ವಿದೇಶಿ ಪ್ರವಾಸವನ್ನು ರದ್ದುಪಡಿಸಲು ನಿರ್ಧರಿಸಿದ್ದಾರೆ ಎಂದು ವರದಿಯೊಂದು ತಿಳಿಸಿದೆ.
ಅಕ್ಟೋಬರ್ 16ರಂದೇ ಅಯೋಧ್ಯೆ ಪ್ರಕರಣದ ವಾದ, ಪ್ರತಿವಾದ ಅಂತ್ಯಗೊಳಿಸಲು ಈಗಾಗಲೇ ಸ್ಪಷ್ಟ ನಿರ್ದೇಶನ ನೀಡಿರುವ ಸುಪ್ರೀಂಕೋರ್ಟ್ ಸಿಜೆಐ, ಅಯೋಧ್ಯೆ ವಿವಾದ ಕುರಿತ ಅಂತಿಮ ತೀರ್ಪು ಬರೆಯಲು ಸಮಯಾವಕಾಶ ಸಾಕಾಗಲಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿರುವುದಾಗಿ ವರದಿ ಹೇಳಿದೆ.
ಸಿಜೆಐ ರಂಜನ್ ಗೋಗೊಯಿ ಅವರು ಅಧಿಕೃತವಾಗಿ ಅಕ್ಟೋಬರ್ 18ರಿಂದ ದುಬೈ, ಕೈರೋ, ಬ್ರೆಜಿಲ್ ಮತ್ತು ನ್ಯೂಯಾರ್ಕ್ ನಲ್ಲಿ ನಡೆಯಲಿರುವ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಾಗಿತ್ತು. ವಿದೇಶ ಪ್ರವಾಸದಿಂದ ಅಕ್ಟೋಬರ್ 31ಕ್ಕೆ ಭಾರತಕ್ಕೆ ವಾಪಸ್ ಆಗಲು ಕಾರ್ಯಕ್ರಮವನ್ನು ನಿಗದಿಗೊಳಿಸಲಾಗಿತ್ತು. ಸಿಜೆಐ ಪ್ರವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಸಿರು ನಿಶಾನೆ ನೀಡಿರುವುದಾಗಿ ಸುಪ್ರೀಂಕೋರ್ಟ್ ಮೂಲಗಳು ತಿಳಿಸಿದೆ ಎಂದು ದ ಪ್ರಿಂಟ್ ವರದಿ ಮಾಡಿದೆ.
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಕಲಾಪಕ್ಕೆ ಅಕ್ಟೋಬರ್ 17ರಿಂದ ನವೆಂಬರ್ 3ರವರೆಗೆ ರಜೆ. ಈ ಹಿನ್ನೆಲೆಯಲ್ಲಿ ಮಂಗಳವಾರ, ಸಿಜೆಐ ಅವರ ವಿದೇಶ ಪ್ರವಾಸ ರದ್ದುಗೊಳಿಸುವಂತೆ ಕೇಂದ್ರ ಸರಕಾರಕ್ಕೆ ಸಿಜೆಐ ಕಚೇರಿ ಮಾಹಿತಿ ನೀಡಿರುವುದಾಗಿ ವರದಿ ತಿಳಿಸಿದೆ. ಆದರೆ ಪ್ರವಾಸ ರದ್ದುಗೊಳಿಸಲು ಯಾವುದೇ ಅಧಿಕೃತ ಕಾರಣ ನೀಡಿಲ್ಲ ಎಂದು ಮೂಲಗಳು ಹೇಳಿವೆ.
ನವೆಂಬರ್ 17ರಂದು ಸಿಜೆಐ ರಂಜನ್ ಗೋಗೊಯಿ ಸೇವೆಯಿಂದ ನಿವೃತ್ತಿಯಾಗಲಿದ್ದು, ಈ ನಿಟ್ಟಿನಲ್ಲಿ ಹೈಪ್ರೊಫೈಲ್ ಅಯೋಧ್ಯೆ ಪ್ರಕರಣದ ಅಂತಿಮ ತೀರ್ಪನ್ನು ಪ್ರಕಟಿಸುವ ಸಾಧ್ಯತೆ ಇದ್ದಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ದೆಹಲಿ: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಿವಾಹಿತ ಮಹಿಳೆ ಮೇಲೆ ಗುಂಡಿನ ದಾಳಿ; ಮೃತ್ಯು

ರಸ್ತೆ ಬದಿ ನಿಂತಿದ್ದವರ ಮೇಲೆ ಸಾಮೂಹಿಕ ಗುಂಡಿನ ದಾಳಿ: 9 ಮಂದಿಗೆ ಗಾಯ

ಉದ್ದಿಮೆಗಳ ಖಾತಾ ಬದಲಾವಣೆ ಸಮಸ್ಯೆಗೆ ತ್ವರಿತ ಪರಿಹಾರ: ಅತಿಕ್

ದೊಡ್ಡ ಟ್ರೋಫಿ ಇನ್ನೂ ಒಂದಿದೆ: ಶಫಾಲಿ ವರ್ಮ

ಪಠಾಣ್ ಯಶಸ್ಸು; ಜೀವನವನ್ನು ಮತ್ತೆ ಸಿನಿಮಾಕ್ಕೆ ತಂದಿದ್ದಕ್ಕಾಗಿ ಧನ್ಯವಾದಗಳು ಎಂದ ಶಾರುಖ್