ಪಶ್ಚಿಮ ಬಂಗಾಳದ ಭಾತ್‌ಪಾರದಲ್ಲಿ ಮತ್ತೆ ಹಿಂಸಾಚಾರ; ಓರ್ವ ಬಲಿ

Team Udayavani, Jun 20, 2019, 2:43 PM IST

ಕೋಲ್ಕತಾ: ಪಶ್ಚಿಮ ಬಂಗಾಳದ ಭಾತ್‌ಪಾರಾ ಎಂಬಲ್ಲಿ ಮತ್ತೆ ಹಿಂಸಾಚಾರ ಸಂಭವಿಸಿದ್ದು, ಓರ್ವ ವ್ಯಕ್ತಿಯನ್ನು ಗುಂಡಿಕ್ಕಿ ಸಾಯಿಸಲಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

2 ಗುಂಪುಗಳ ನಡುವೆ ಗುರುವಾರ ಘರ್ಷಣೆ ನಡೆದಿದ್ದು, ರಾಮ್‌ ಬಾಬು ಶಾ ಎನ್ನುವ ವ್ಯಕ್ತಿಯ ಹತ್ಯೆ ನಡೆದಿದೆ.ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಆ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿವೆ.

ಎರಡು ಗುಂಪುಗಳು ಕಚ್ಚಾ ಬಾಂಬ್‌ಗಳನ್ನು ಎಸೆದಿದ್ದು, ಗುಂಡಿನ ಕಾಳಗವನ್ನೂ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ಕರೆಸಿ ಭದ್ರತೆ ಬಿಗಿಗೊಳಿಸಲಾಗಿದೆ. ರ್ಯಾಪಿಡ್‌ ಆ್ಯಕ್ಷನ್‌ ಫೋರ್ಸ್‌ ಪಡೆಗಳನ್ನುನಿಯೋಜಿಸಿ ಕಟ್ಟೆಚ್ಚರ ವಹಿಸಲಾಗಿದೆ.

ಮೇ 19 ರಂದು ಭಾತ್‌ಪಾರದಲ್ಲಿ ಉಪಚುನಾವಣೆ ನಡೆದ ವೇಳೆ ಭಾರೀ ಹಿಂಸಾಚಾರ ನಡೆದಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ