ರೈತ ಸಾಲ ಮನ್ನಾಗೆ ಕೇಂದ್ರದ 50 % ನೆರವು ಕೋರಿದ ಸಿಎಂ ಎಚ್ಡಿಕೆ
Team Udayavani, Jun 17, 2018, 4:00 PM IST
ಹೊಸದಿಲ್ಲಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸಾಲ ಮನ್ನಾಗೆ ಕೇಂದ್ರ ಸರ್ಕಾರ 50 ಶೇಕಡಾ ನೆರವು ನೀಡಬೇಕು ಎಂದು ಕೋರಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ನೀತಿ ಆಯೋಗದ ಸಭೆಯಲ್ಲಿ ಮಾತನಾಡಿದ ಎಚ್ಡಿಕೆ ರಾಜ್ಯದಲ್ಲಿ 85 ಲಕ್ಷ ಮಂದಿ ರೈತರು ಸಾಲ ಮಾಡಿದ್ದಾರೆ. ಬರದಿಂದ ರೈತರು ಅಪಾರ ನಷ್ಟ ಅನುಭವಿಸಿದ್ದು, ರಾಜ್ಯಕ್ಕೆ ಕೇಂದ್ರ ನೇರವು ನೀಡಬೇಕು ಎಂದು ಕೋರಿದ್ದಾರೆ.
ಮೊದಲ ಬಾರಿ ನಾನು ನೀತಿ ಆಯೋಗದ ಸಭೆಯಲ್ಲಿ ಭಾಗಿಯಾಗಿದ್ದೇನೆ . ನಮ್ಮ ಸಮ್ಮಿಶ್ರ ಸರ್ಕಾರ ರೈತರ ಸಮಸ್ಯೆಗೆ ಸ್ಪಂದಿಸಲು ಸಿದ್ದವಿದ್ದು ಕೇಂದ್ರದ ನೆರವು ಅಗತ್ಯವಾಗಿದೆ ಎಂದರು.
ಅಭಿವೃದ್ಧಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಜೊತೆ ಕೈ ಜೋಡಿಸುತ್ತೇವೆ. ಕೇಂದ್ರಕ್ಕೆ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ