ಭಾರತ ಜತೆ ಬಾಂಧವ್ಯಕ್ಕೆ ಬದ್ಧ
Team Udayavani, Mar 20, 2021, 6:45 AM IST
ಹೊಸದಿಲ್ಲಿ: ಅಮೆರಿಕದಲ್ಲಿ ಜೋ ಬೈಡೆನ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಅಲ್ಲಿನ ರಕ್ಷಣಾ ಸಚಿವ ಲಾಯ್ಡ ಜೇಮ್ಸ್ ಆಸ್ಟಿನ್ ಭಾರತ ಪ್ರವಾಸ ಕೈಗೊಂಡಿದ್ದಾರೆ. ಶುಕ್ರವಾರ ಅವರು ಹೊಸದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು.
ಈ ಸಂದರ್ಭದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸುವ ಬಗ್ಗೆ ಮಾತನಾಡಿದರು. ಈ ವೇಳೆ ಮೋದಿಯವರು, ರಕ್ಷಣಾ ಕ್ಷೇತ್ರದಲ್ಲಿ ಉಭಯ ದೇಶಗಳ ನಡುವಿನ ಸಹಕಾರಕ್ಕೆ ಇರುವ ಮಹತ್ವವನ್ನು ಉಲ್ಲೇಖೀಸಿದರು ಎಂದು ಪ್ರಧಾನಿ ಕಚೇರಿ ತಿಳಿಸಿದೆ.
ಹೊಸದಿಲ್ಲಿಗೆ ಆಗಮಿಸಿದ ಕೂಡಲೇ ಟ್ವೀಟ್ ಮಾಡಿದ ಲಾಯ್ಡ “ಭಾರತದ ಪ್ರವಾಸ ಆರಂಭಿಸಿದ್ದು ಖುಷಿ ತಂದಿದೆ. 2 ದೇಶಗಳ ನಡುವಿನ ರಕ್ಷಣಾ ಸಹಕಾರ ಮತ್ತಷ್ಟು ದೃಢ ಗೊಳ್ಳಲಿದೆ’ ಎಂದು ಬರೆದುಕೊಂಡಿದ್ದಾರೆ. ಇದಕ್ಕೂ ಮೊದಲು ಅವರು, ಜಪಾನ್, ದ.ಕ್ಷಿಣ ಕೊರಿಯಾಕ್ಕೂ ಭೇಟಿ ನೀಡಿದ್ದರು.
ರಾಜನಾಥ್ ಜತೆ ಭೇಟಿ: ಲಾಯ್ಡ ಅವರು ಶನಿವಾರ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದಾರೆ. “ಭಾರತಕ್ಕೆ ನಿಮಗೆ ಸ್ವಾಗತ’ ಎಂದು ರಾಜನಾಥ್ ಟ್ವೀಟ್ ಮಾಡಿದ್ದಾರೆ. ಇದೇ ವೇಳೆ, ಅಮೆರಿಕದಿಂದ ಕೇಂದ್ರ ಖರೀದಿಸಲು ಉದ್ದೇಶಿಸಿರುವ 18 ಬಿಲಿಯನ್ ಡಾಲರ್ ಮೊತ್ತದ 114 ಯುದ್ಧ ವಿಮಾನಗಳ ಡೀಲ್ ಬಗ್ಗೆಯೂ ಪ್ರಸ್ತಾಪವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ