ಏಕ ಚುನಾವಣೆಗೆ ಸಮಿತಿ ರಚನೆ

ಸರ್ವಪಕ್ಷ ಸಭೆಯಲ್ಲಿ ಮೋದಿ ಘೋಷಣೆ

Team Udayavani, Jun 20, 2019, 6:00 AM IST

d-38

ಹೊಸದಿಲ್ಲಿ: ಏಕಕಾಲದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ನಡೆಸುವ ಬಗ್ಗೆ ಪರಿಶೀಲನೆ ನಡೆಸುವ ಸಂಬಂಧ ಸಮಿತಿ ರಚಿಸಲು ನಿರ್ಧರಿಸಲಾಗಿದೆ. ಬುಧವಾರ ದಿಲ್ಲಿ ಯಲ್ಲಿ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಘೋಷಣೆ ಮಾಡಿದ್ದಾರೆ.

ಸಿಪಿಐ, ಸಿಪಿಎಂ ನಾಯಕರು ಸಭೆಯಲ್ಲಿ ಭಾಗ ವಹಿಸಿ ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಭೆಗೆ ಕಾಂಗ್ರೆಸ್‌ ನಾಯಕರು ಗೈರು ಹಾಜರಾಗಿದ್ದರು. ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ಟಿಆರ್‌ಎಸ್‌ ನಾಯಕ ಚಂದ್ರಶೇಖರ ರಾವ್‌, ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು, ಆಮ್‌ ಆದ್ಮಿ ಪಕ್ಷದ ಸಂಚಾಲಕ ಅರವಿಂದ ಕೇಜ್ರಿವಾಲ್‌ ಕೂಡ ಗೈರು ಹಾಜರಾಗಿದ್ದರು. ಆದರೆ ಅವರು ತಮ್ಮ ಪ್ರತಿನಿಧಿಗಳನ್ನು ಕಳುಹಿಸಿಕೊಟ್ಟಿದ್ದರು. ಎಸ್‌ಪಿ, ಬಿಎಸ್‌ಪಿ ಸಂಪೂರ್ಣ ದೂರ ಉಳಿದಿದ್ದವು.

ಸಮಿತಿ ರಚನೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸರ್ವಪಕ್ಷಗಳ ಸಭೆಯ ಬಗ್ಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ವಿವರಣೆ ನೀಡಿದರು. ಸಭೆಯಲ್ಲಿ ಭಾಗವಹಿಸಿದ್ದ ಎಲ್ಲ ಪಕ್ಷಗಳೂ ಸರಕಾರದ ಪ್ರಸ್ತಾವಕ್ಕೆ ಬೆಂಬಲ ಸೂಚಿಸಿವೆ ಎಂದರು. ಆದರೆ ಪ್ರಸ್ತಾವಿತ ಸಮಿತಿ ಯಾವ ರೀತಿಯಲ್ಲಿ ಇರಲಿದೆ ಎಂಬ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.

40 ರಾಜಕೀಯ ಪಕ್ಷಗಳ ನಾಯಕರನ್ನು ಆಹ್ವಾ ನಿಸಲಾಗಿತ್ತು. ಈ ಪೈಕಿ 21 ಪಕ್ಷಗಳ ಅಧ್ಯಕ್ಷರು ಭಾಗವಹಿಸಿದ್ದರು. ಮೂರು ಪಕ್ಷಗಳು ತಮ್ಮ ಅಭಿಪ್ರಾಯಗಳನ್ನು ಲಿಖೀತವಾಗಿ ಸಲ್ಲಿಸಿದ್ದವು ಎಂದು ರಾಜನಾಥ್‌ ಸಿಂಗ್‌ ಹೇಳಿದರು.

ಸಿಪಿಐ, ಸಿಪಿಎಂ ನಾಯಕರಾದ ಡಿ.ರಾಜಾ, ಸೀತಾರಾಂ ಯೆಚೂರಿ ಸಭೆಯಲ್ಲಿ ಭಾಗವಹಿಸಿ ಕೇಂದ್ರ ಸರಕಾರದ ಪ್ರಸ್ತಾವದ ಬಗ್ಗೆ ಆಕ್ಷೇಪ ವ್ಯಕ್ತ ಪಡಿಸಿದರು. ಎಡ ಪಕ್ಷಗಳ ನಾಯಕರು ಸರಕಾರದ ಪ್ರಸ್ತಾವದ ಬಗ್ಗೆ ಬೆಂಬಲ ವ್ಯಕ್ತಪಡಿ ಸಿದರಾದರೂ ಅನುಷ್ಠಾನದ ಬಗ್ಗೆ ವಿರೋಧಿಸಿದರು ಎಂದರು ರಕ್ಷಣಾ ಸಚಿವರು.

ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ಅಧ್ಯಕ್ಷ ನಿತೀಶ್‌ ಕುಮಾರ್‌, ಒಡಿಶಾ ಮುಖ್ಯಮಂತ್ರಿ ಮತ್ತು ಬಿಜು ಜನತಾ ದಳದ ಅಧ್ಯಕ್ಷ ನವೀನ್‌ ಪಟ್ನಾಯಕ್‌, ಪಿಡಿಪಿಯ ಮೆಹಬೂಬಾ ಮುಫ್ತಿ, ನ್ಯಾಶನಲ್‌ ಕಾನ್ಫರೆನ್ಸ್‌ನ ಡಾ| ಫಾರೂಕ್‌ ಅಬ್ದುಲ್ಲಾ, ವೈ.ಎಸ್‌.ಆರ್‌.ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್‌.ಜಗನ್ಮೋಹನ ರೆಡ್ಡಿ, ಶಿರೋಮಣಿ ಅಕಾಲಿ ದಳದ ಸುಖ್‌ಬೀರ್‌ ಸಿಂಗ್‌ ಬಾದಲ್‌ ಭಾಗವಹಿಸಿದ್ದರು.

ಕಠಿನ ನಿಯಮಕ್ಕೆ ಆಯೋಗ ಸಲಹೆ
ಏಕಕಾಲದಲ್ಲಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಕಾನೂನು ಆಯೋಗ ಕಠಿನ ಕ್ರಮಗಳು ಇರುವ ಸಲಹೆಗಳನ್ನು ಈಗಾಗಲೇ ಸೂಚಿಸಿದೆ. ಜನತಾ ಪ್ರಾತಿನಿಧ್ಯ ಕಾಯ್ದೆ, ಸಂವಿಧಾನಕ್ಕೆ ತಿದ್ದುಪಡಿ ತರುವ ಬಗ್ಗೆ 2018ರ ಆಗಸ್ಟ್‌ನಲ್ಲಿ ಸಲಹೆ ಮಾಡಿತ್ತು. ಹೆಚ್ಚಿನ ರಾಜ್ಯಗಳು ಈ ಪ್ರಯತ್ನಕ್ಕೆ ಸಮ್ಮತಿ ಸೂಚಿಸಿದಲ್ಲಿ ಮತ್ತು ಸಂವಿಧಾನದ 2 ಅಂಶಗಳಿಗೆ ತಿದ್ದುಪಡಿಯಾದಲ್ಲಿ ಈ ಕ್ರಮ ಜಾರಿಗೆ ತರಬಹುದು ಎಂದು ಸೂಚಿಸಿತ್ತು.

ಹಿಂದೆಯೂ ನಡೆದಿತ್ತು
ಲೋಕಸಭೆ, ವಿಧಾನಸಭೆಗಳಿಗೆ ಏಕ ಕಾಲ ದಲ್ಲಿ ಚುನಾವಣೆ ನಡೆಸುವ ಬಗ್ಗೆ ಹಿಂದಿನ ಸಂದರ್ಭಗಳಲ್ಲಿಯೂ ಪ್ರಯತ್ನ ಗಳು ನಡೆದಿದ್ದವು. 1952, 1957, 1962, 1967ರಲ್ಲಿ ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾ ವಣೆಗಳು ನಡೆದಿದ್ದವು. ಆದರೆ 1967ರಲ್ಲಿ ಲೋಕಸಭೆಯನ್ನು ಅವಧಿಗೆ ಮುನ್ನವೇ ವಿಸರ್ಜಿಸಲಾಗಿತ್ತು. ಜತೆಗೆ 1968, 1969ರಲ್ಲಿ ಕೆಲವು ವಿಧಾನಸಭೆಗಳನ್ನು ಅವಧಿಗೆ ಮುನ್ನವೇ ವಿಸರ್ಜಿಸಲಾಗಿತ್ತು.

1983ರಲ್ಲಿ ಮತ್ತೆ ಶಿಫಾರಸು
1967ರ ಬಳಿಕ 1983ರಲ್ಲಿ ಅಂದರೆ 16 ವರ್ಷಗಳ ಬಳಿಕ ಚುನಾವಣ ಆಯೋಗ ತನ್ನ ವಾರ್ಷಿಕ ವರದಿಯಲ್ಲಿ ಏಕಕಾಲದಲ್ಲಿ ಚುನಾವಣೆ ವಿಚಾರ ಪ್ರಸ್ತಾವಿಸಿತ್ತು. 1999ರಲ್ಲಿ ಕಾನೂನು ಆಯೋಗದ ವರದಿ ಯಲ್ಲಿಯೂ ಇದೇ ಅಂಶ ಉಲ್ಲೇಖೀಸ ಲಾಗಿತ್ತು. 2014ರಲ್ಲಿ ಬಿಜೆಪಿ ತನ್ನ ಚುನಾ ವಣ ಪ್ರಣಾಳಿಕೆಯಲ್ಲಿ ಒಂದು ರಾಷ್ಟ್ರ; ಒಂದು ಚುನಾವಣೆ ಬಗ್ಗೆ ವಾಗ್ಧಾನ ಮಾಡಿತ್ತು. 2017ರಲ್ಲಿ ನೀತಿ ಆಯೋಗ ಈ ಬಗ್ಗೆ ಸಲಹಾ ಪತ್ರಿಕೆ ಸಿದ್ಧಪಡಿಸಿತ್ತು.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.