ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ ವಿರೋಧಿಸಿ ಐಪಿಎಸ್ ಹುದ್ದೆ ತೊರೆದ ಅಧಿಕಾರಿ
ಮಹಾರಾಷ್ಟ್ರದ ಹಿರಿಯ ಐಪಿಎಸ್ ಅಧಿಕಾರಿ ಅಬ್ದುರ್ ರಹಮಾನ್ ತಮ್ಮ ಹುದ್ದೆಗೆ ಬುಧವಾರ ರಾಜೀನಾಮೆ
Team Udayavani, Dec 12, 2019, 10:15 AM IST
ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರವಾಗಿರುವುದನ್ನು ಪ್ರತಿಭಟಿಸಿ ಮಹಾರಾಷ್ಟ್ರದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ವರದಿಯಾಗಿದೆ.
ಮಹಾರಾಷ್ಟ್ರದ ಹಿರಿಯ ಐಪಿಎಸ್ ಅಧಿಕಾರಿ ಅಬ್ದುರ್ ರಹಮಾನ್ ತಮ್ಮ ಹುದ್ದೆಗೆ ಬುಧವಾರ ರಾಜೀನಾಮೆ ನೀಡಿದ್ದಾರೆ. ಬುಧವಾರ ರಾಜ್ಯಸಭೆಯಲ್ಲಿ ವಿವಾದಿತ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರವಾದ ಬೆನ್ನಲ್ಲೇ ರಹಮಾನ್ ತನ್ನ ರಾಜೀನಾಮೆಯನ್ನು ಘೋಷಿಸಿದ್ದರು ಎಂದು ವರದಿ ವಿವರಿಸಿದೆ.
“ಇದೊಂದು ಮತೀಯವಾದದ್ದು ಹಾಗೂ ಸಂವಿಧಾನದ ಮೂಲಭೂತ ಆಶಯಕ್ಕೆ ವಿರುದ್ಧವಾಗಿದೆ ಎಂದು ರಹಮಾನ್ ಅಭಿಪ್ರಾಯವ್ಯಕ್ತಪಡಿಸಿದ್ದು, ಗುರುವಾರದಿಂದ ತಾನು ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದು ತಿಳಿಸಿದ್ದಾರೆ.