ಭಾರತದಲ್ಲಿ ಕಾಂಗ್ರೆಸ್, ಜಾಗತಿಕವಾಗಿ ಕಮ್ಯೂನಿಷ್ಟ್ ನೆಲಕಚ್ಚಲಿದೆ: ಶಾ
Team Udayavani, May 6, 2017, 4:46 PM IST
ನವದೆಹಲಿ:ತ್ರಿಪುರಾದಲ್ಲಿನ ಮುಂದಿನ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರದ ಗದ್ದುಗೆ ಏರಲಿದೆ ಎಂಬ ವಿಶ್ವಾಸವಿದೆ. ಆದರೆ ಕಮ್ಯೂನಿಷ್ಟ್ ಪಕ್ಷ ಜಾಗತಿಕವಾಗಿ ನೆಲಕಚ್ಚಲಿದೆ, ಅದೇ ರೀತಿ ಕಾಂಗ್ರೆಸ್ ಪಕ್ಷ ಭಾರತದಲ್ಲಿ ಸಂಪೂರ್ಣವಾಗಿ ನಶಿಸಿ ಹೋಗಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭವಿಷ್ಯ ನುಡಿದಿದ್ದಾರೆ.
ತ್ರಿಪುರಕ್ಕಾ ಶನಿವಾರದಿಂದ 2 ದಿನಗಳ ಕಾಲ ಭೇಟಿ ನೀಡಿದ್ದ ಶಾ ಸುದ್ದಿಗಾರರ ಜೊತೆ ಮಾತನಾಡುತ್ತ ಕಾಂಗ್ರೆಸ್ ಮತ್ತು ಕಮ್ಯೂನಿಷ್ಟ್ ವಿರುದ್ಧ ವಾಗ್ದಾಳಿ ನಡೆಸಿದರು.
ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತ್ರಿಪುರಾದಲ್ಲಿ ಕಮ್ಯೂನಿಷ್ಟ್ ಸರ್ಕಾರವನ್ನು ಅಧಿಕಾರದ ಗದ್ದುಗೆಯಿಂದ ಕೆಳಗಿಳಿಸುವ ನಿಟ್ಟಿನಲ್ಲಿ ಶಾ ಅವರು ಪರಿವರ್ತನ್ ಯಾತ್ರಾಗೆ ಚಾಲನೆ ನೀಡಲಿದ್ದಾರೆ ಎಂದು ವರದಿ ತಿಳಿಸಿದೆ. ತ್ರಿಪುರಾ ರಾಜ್ಯದಲ್ಲಿ 1993ರಿಂದ ಕಮ್ಯೂನಿಷ್ಟ್ ಪಕ್ಷ ನಿರಂತರವಾಗಿ ಸರ್ಕಾರ ನಡೆಸುತ್ತಾ ಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಿಶ್ವಾಸ ಇಟ್ಟು, ಬೆಂಬಲ ನೀಡುವ ಮೂಲಕ ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿಯೂ ಜನರು ಬಿಜೆಪಿ ಸರ್ಕಾರವನ್ನೇ ಅಧಿಕಾರಕ್ಕೆ ತಂದಿದ್ದಾರೆ. ನನ್ನ ಪ್ರಕಾರ ಸ್ವಾತಂತ್ರ್ಯ ನಂತರ ನರೇಂದ್ರ ಮೋದಿ ಜನಪ್ರಿಯ ನಾಯಕರಾಗುತ್ತಿದ್ದಾರೆ. ವಿವಿಧ ರಾಜ್ಯಗಳಲ್ಲಿ ನಡೆದ ಚುನಾವಣೆಗಳಲ್ಲಿಯೂ ಜನರು ಮೋದಿ ಅವರನ್ನೇ ಬೆಂಬಲಿಸುವ ನಿಟ್ಟಿನಲ್ಲಿ ಬಿಜೆಪಿ ಪಕ್ಷವನ್ನು ಆಯ್ಕೆ ಮಾಡಿದ್ದಾರೆ ಎಂದು ಶಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜೀವ್ ಹತ್ಯೆ ಪ್ರಕರಣ:ಜೀವಾವಧಿ ಶಿಕ್ಷೆಗೊಳಗಾಗಿದ್ದ ಪೆರಾರಿವಾಳನ್ ಬಿಡುಗಡೆಗೆ ಸುಪ್ರೀಂ ಆದೇಶ
ಹಾಸಿಗೆಗಾಗಿ ಆನೆಯ ಕಿತ್ತಾಟ -ವಿಡಿಯೋ ವೈರಲ್
ಮತ್ತೆ ಆರೆಂಜ್ ಅಲರ್ಟ್; ಎರ್ನಾಕುಳಂ, ಇಡುಕ್ಕಿ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ರಾಮ ಮಂದಿರ ಅಡಿಪಾಯ ಆಗಸ್ಟ್ಗೆ ಸಂಪೂರ್ಣ : ಫೆಬ್ರವರಿಯಲ್ಲಿ ಆರಂಭವಾಗಿದ್ದ ಕಾಮಗಾರಿ
ಪತ್ನಿಗೆ ಸೀರೆ ಉಡಲು ಬರುವುದಿಲ್ಲ: ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ !