ಬಾಲಕಿಯ ಗ್ಯಾಂಗ್ ರೇಪ್ : ಕಾಂಗ್ರೆಸ್ ಶಾಸಕನ ಪುತ್ರ ಸೇರಿ ಐವರ ಮೇಲೆ ಕೇಸ್

ಅಶ್ಲೀಲ ವಿಡಿಯೋ ಮಾಡಿ 5 ಲಕ್ಷ ರೂ., ಚಿನ್ನಾಭರಣಗಳ ಸುಲಿಗೆ

Team Udayavani, Mar 26, 2022, 6:53 PM IST

rape

ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕಾಂಗ್ರೆಸ್ ಶಾಸಕರ ಪುತ್ರ ಮತ್ತು ಇತರ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಪ್ರಮುಖ ಆರೋಪಿಯನ್ನು ಅಲ್ವಾರ್ ಜಿಲ್ಲೆಯ ರಾಜ್‌ಗಢ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಜೋಹರಿ ಲಾಲ್ ಮೀನಾ ಅವರ ಪುತ್ರ ದೀಪಕ್ ಮೀನಾ ಎಂದು ಪೊಲೀಸರು ಗುರುತಿಸಿದ್ದಾರೆ.

ಐವರು ಆರೋಪಿಗಳಲ್ಲಿ ಒಬ್ಬನಾದ ವಿವೇಕ್ ಶರ್ಮಾ ಸಂತ್ರಸ್ತೆಯ ಬಳಿ ಸಾಮೂಹಿಕ ಅತ್ಯಾಚಾರದ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಸಿ 15 ಲಕ್ಷ ರೂಪಾಯಿ ನಗದು ಮತ್ತು ಚಿನ್ನಾಭರಣಗಳನ್ನು ಸುಲಿಗೆ ಮಾಡಿದ್ದಾರೆ ಎಂದು ಮಾಂದಾವರ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ನಾಥು ಲಾಲ್ ಹೇಳಿದ್ದಾರೆ.

ರಾಜ್‌ಗಢ ಶಾಸಕರ ಪುತ್ರ ದೀಪಕ್ ಮೀನಾ ಸೇರಿದಂತೆ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು,ಇತರ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಐಪಿಸಿಯ ಇತರ ಸೆಕ್ಷನ್‌ಗಳ ಅಡಿಯಲ್ಲಿ ಅಪ್ರಾಪ್ತ ವಯಸ್ಕ ಸಂತ್ರಸ್ತೆಯ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಶುಕ್ರವಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಫೆಬ್ರವರಿಯಲ್ಲಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯು ಬಾಲಕಿಯನ್ನು ಮಾಹ್ವಾ-ಮಂದಾವರ್ ರಸ್ತೆಯಲ್ಲಿರುವ ಹೋಟೆಲ್‌ಗೆ ಕರೆದೊಯ್ದು ಅಪರಾಧ ಎಸಗಿದ್ದಾನೆ, ಆಕೆಗೆ ಬೆದರಿಕೆ ಹಾಕಲು ಅಶ್ಲೀಲ ವಿಡಿಯೋ ಕೂಡ ಮಾಡಿದ್ದಾರೆ ಎಂದು ಎಸ್‌ಎಚ್‌ಒ ಹೇಳಿದ್ದಾರೆ.

ಮನೆಯಲ್ಲಿದ್ದ ನಗದು ಹಾಗೂ ಚಿನ್ನಾಭರಣಗಳು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಬಾಲಕಿಯ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಈ ವಿಚಾರದಲ್ಲಿ ಕುಟುಂಬಸ್ಥರು ಆರಂಭದಲ್ಲಿ ಕಳ್ಳತನದ ದೂರು ದಾಖಲಿಸಿದ್ದರು. ಈ ಕೃತ್ಯದಲ್ಲಿ ಶರ್ಮಾ ಭಾಗಿಯಾಗಿರುವುದು ಕಂಡುಬಂದಿದೆ, ನಂತರ ಸಂತ್ರಸ್ತ ಬಾಲಕಿ ತನ್ನ ತಾಯಿಯೊಂದಿಗೆ ತನ್ನ ಕಷ್ಟವನ್ನು ಹಂಚಿಕೊಳ್ಳಲು ಧೈರ್ಯ ತೋರಿದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.