ಜವಾಹರಲಾಲ್ ನೆಹರೂ ಫೋಟೋ ಬಗ್ಗೆ ಪಶ್ಚಿಮ ಬಂಗಾಳದಲ್ಲೂ ವಿವಾದ
Team Udayavani, Aug 16, 2022, 9:48 PM IST
ಕೋಲ್ಕತ: ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಫೋಟೋವನ್ನು ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಸೇರಿಸದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಗ್ಗೆ ಪಶ್ಚಿಮ ಬಂಗಾಳದ ಕಾಂಗ್ರೆಸ್ ಕೆಂಡ ಕಾರಿದೆ.
ಮಮತಾ ಅವರು ಮಹಾತ್ಮ ಗಾಂಧಿ ಸೇರಿ ಹತ್ತಾರು ಸ್ವಾತಂತ್ರ್ಯ ಹೋರಾಟಗಾರರಿರುವ ಫೋಟೋವನ್ನು ಟ್ವಿಟರ್ನಲ್ಲಿ ತಮ್ಮ ಡಿಪಿಯನ್ನಾಗಿ ಬದಲಾಯಿಸಿದ್ದಾರೆ. ಆದರೆ ಆ ಫೋಟೋದಲ್ಲಿ ನೆಹರೂ ಅವರಿಲ್ಲ. ಇದನ್ನು ಕಾಂಗ್ರೆಸ್ ಖಂಡಿಸಿದ್ದು, ಮಮತಾ ಅವರು ಉದ್ದೇಶಪೂರ್ವಕವಾಗಿಯೇ ನೆಹರೂ ಫೋಟೋ ಬಿಟ್ಟಿದ್ದಾರೆ ಎಂದು ದೂರಿದೆ.
ಹಾಗೆಯೇ ಪುಟಾಣಿ ಬಾಲಕಿಯೊಬ್ಬಳು ಬರೆದಿರುವ ನೆಹರೂ ಫೋಟೋವನ್ನು ಹಂಚಿಕೊಂಡಿದ್ದು, “ಮಮತಾ ಬ್ಯಾನರ್ಜಿ ಮತ್ತು ಅವರ ಪಕ್ಷವು ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಈ ಪುಟಾಣಿಯಿಂದ ಪಾಠ ಕಲಿಯಬೇಕಿದೆ’ ಎಂದು ಕಾಂಗ್ರೆಸ್ ಟೀಕಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ