ಕಾಂಗ್ರೆಸ್ ಛೋಡೋ, ಬಿಜೆಪಿ ಕೋ ಜೋಡೋ : ಗೋವಾದಲ್ಲಿ 8 ಕೈ ಶಾಸಕರು ಬಿಜೆಪಿ ತೆಕ್ಕೆಗೆ !
Team Udayavani, Sep 14, 2022, 12:48 PM IST
ಪಣಜಿ : ಒಂದು ಕಡೆ ಭಾರತ್ ಜೋಡೋ ಯಾತ್ರೆ’ಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಗೊಳಿಸಲು ಮುಂದಾದರೆ ಗೋವಾದಲ್ಲಿ ಎಂಟು ಜನ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲು ಮುಂದಾಗಿದ್ದಾರೆ ಎಂದು ಗೋವಾ ಬಿಜೆಪಿ ಅಧ್ಯಕ್ಷ ಸದಾನಂದ ತನವಡೆ ಹೇಳಿದ್ದಾರೆ.
11 ಶಾಸಕರಲ್ಲಿ ಎಂಟು ಮಂದಿ ಹಿರಿಯು ನಾಯಕರಾದ ದಿಗಂಬರ್ ಕಾಮತ್ ಮತ್ತು ಮೈಕೆಲ್ ಲೋಬೋ ನೇತೃತ್ವದಲ್ಲಿ ಇಂದು ಆಡಳಿತಾರೂಢ ಬಿಜೆಪಿಗೆ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಅವರು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹಾಗೂ ವಿಧಾನಸಭಾ ಸ್ಪೀಕರ್ ಅವರನ್ನು ಭೇಟಿ ಮಾಡಿದ್ದಾರೆ.
ಕಾಂಗ್ರೆಸ್ ಶಾಸಕರಲ್ಲಿ ದಿಗಂಬರ್ ಕಾಮತ್, ಮೈಕೆಲ್ ಲೋಬೋ, ದೇಲಿಲಾ ಲೋಬೋ, ರಾಜೇಶ್ ಫಾಲ್ದೇಸಾಯಿ, ಕೇದಾರ್ ನಾಯಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೋ ಸಿಕ್ವೇರಾ ಮತ್ತು ರುಡಾಲ್ಫ್ ಫೆರ್ನಾಂಡಿಸ್ ಸೇರಿ ಎಂಟು ಮಂದಿ ಬಿಜೆಪಿ ಸೇರಿದ್ದಾರೆ.
ವಿಧಾನಸಭೆ ಕಲಾಪ ನಡೆಯದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಶಾಸಕರು ಸಭಾಧ್ಯಕ್ಷರನ್ನು ಭೇಟಿಯಾಗಿರುವುದು ಊಹಾಪೋಹಗಳಿಗೆ ತೆರೆ ಎಳೆದಂತಾಗಿದೆ. ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಬಿಜೆಪಿ ಮುಖ್ಯಸ್ಥ ಸದಾನಂದ ಶೇಟ್ ತನವಡೆ ಖಚಿತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
Hong Kong ಎವರೆಸ್ಟ್, ಎಂಡಿಎಚ್ ಮಸಾಲೆ ಬ್ಯಾನ್
MUST WATCH
ಹೊಸ ಸೇರ್ಪಡೆ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ