‘ಉಪ್ಪು ತುಂಬಿದ ಕೈಗಳು ಒಂದು ಸಾಮ್ರಾಜ್ಯವನ್ನೇ ಅಲುಗಾಡಿಸಿದಾಗ’


Team Udayavani, Mar 12, 2019, 5:59 AM IST

narendra-modi-600.jpg

ನವದೆಹಲಿ: ಈ ದೇಶದ ಪ್ರಮುಖ ಪ್ರತಿಪಕ್ಷವೆಂದೆಣಿಸಿಕೊಂಡಿರುವ ಕಾಂಗ್ರೆಸ್‌ ಮಹಾತ್ಮ ಗಾಂಧಿ ಅವರ ಆದರ್ಶಗಳನ್ನು ಮರೆತುಬಿಟ್ಟಿದೆ ಮಾತ್ರವಲ್ಲದೇ ಕಾಂಗ್ರೆಸ್‌ ಈ ದೇಶವನ್ನು ಜಾತಿ ಮತ್ತು ಧರ್ಮದ ಆಧಾರದಲ್ಲಿ ವಿಭಾಗಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಬ್ಲಾಗ್‌ ಬರಹದಲ್ಲಿ ಕಾಂಗ್ರೆಸ್‌ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

ಬ್ರಿಟೀಶ್‌ ಆಡಳಿತ ದೇಶದಲ್ಲಿ ಉಪ್ಪಿನ ಮೇಲೆ ಹೇರಿದ್ದ ಕರವನ್ನು ವಿರೋಧಿಸಿ ಮಹಾತ್ಮಾ ಗಾಂಧೀಜಿಯವರು ಕೈಗೊಂಡಿದ್ದ ‘ದಂಡಿ’ ಯಾತ್ರೆಗೆ 89 ವರ್ಷಗಳು ಸಂದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ಬೊಗಸೆ ತುಂಬಾ ಉಪ್ಪು ತುಂಬಿದ ಕೈಗಳು ಸಾಮ್ರಾಜ್ಯವೊಂದನ್ನು ಅಲುಗಾಡಿಸಿದಾಗ’ ಎಂಬ ವಿಶಿಷ್ಟ  ಶೀರ್ಷಿಕೆ ಇರುವ ಬ್ಲಾಗ್‌ ಬರಹವೊಂದನ್ನು ಬರೆದಿದ್ದು ಅದರಲ್ಲಿ ಪ್ರಧಾನಿ ಮೋದಿ ಅವರು ‘ಕೈ’ ಪಕ್ಷದ ವಿರುದ್ಧ ಈ ರೀತಿಯ ಗಂಭೀರ ಆರೋಪವನ್ನು ಮಾಡಿದ್ದಾರೆ. ಮಹಾತ್ಮಾ ಗಾಂಧೀಜಿಯವರು ಅಂದು ಬ್ರಿಟಿಷ್‌ ಸಾಮ್ರಾಜ್ಯದ ವಿರುದ್ಧ ಸಂಘಟಿತವಾಗಿ ಕೈಗೊಂಡ ದಂಡಿ ಯಾತ್ರೆಯಿಂದ ಯಾವ ರೀತಿ ಒಂದು ಸಾಮ್ರಾಜ್ಯವೇ ನಡುಕವನ್ನನುಭವಿಸಿತು ಎಂಬ ಅರ್ಥಬರುವಂತೆ ತಮ್ಮ ಬ್ಲಾಗ್‌ ಗೆ ಈ ಶೀರ್ಷಿಕೆಯನ್ನು ಇರಿಸಿದ್ದಾರೆ.

‘ಗಾಂಧೀಜಿ ಅವರು ತಮ್ಮ ಪ್ರತೀ ಕಾರ್ಯಗಳನ್ನೂ ಜಾತಿ, ಧರ್ಮ ರಹಿತವಾಗಿ ಮಾಡಿದರು. ಆದರೆ ಅವರದೇ ತತ್ವಾದರ್ಶಗಳನ್ನು ಪಾಲಿಸುತ್ತಿರುವುದಾಗಿ ಹೇಳಿಕೊಳ್ಳುತ್ತಿರುವ ಕಾಂಗ್ರೆಸ್‌ ಪಕ್ಷವು ಈ ದೇಶದ ಜನರನ್ನು ಜಾತಿ-ಧರ್ಮದ ಆಧಾರದಲ್ಲಿ ಒಡೆಯುವಲ್ಲಿ ಯಾವತ್ತೂ ಹಿಂಜರಿಯಲಿಲ್ಲ. ಇನ್ನು ಕಾಂಗ್ರೆಸ್‌ ಆಡಳಿತ ಕಾಲದಲ್ಲಿ ಗಂಭೀರ ಸ್ವರೂಪದ ದಲಿತರ ಹತ್ಯಾಕಾಂಡಗಳು ಮತ್ತು ಕೋಮುಗಲಭೆಗಳು ಸಂಭವಿಸಿದ ಉದಾಹರಣೆಗಳು ನಮ್ಮ ಕಣ್ಣಮುಂದಿವೆ’ ಎಂದು ಅವರು ಈ ಬರಹದಲ್ಲಿ ನಮೂದಿಸಿದ್ದಾರೆ. ಮತ್ತು ಈ ಮೂಲಕ ಗಾಂಧಿ ಸಂಸ್ಕೃತಿಗೆ ವ್ಯತಿರಿಕ್ತವಾಗಿ ಹೇಗೆ ಕಾಂಗ್ರೆಸ್‌ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ಪ್ರಧಾನಿ ಮೋದಿ ಅವರು ಒಂದೊಂದೇ ಅಂಶಗಳ ಮೂಲಕ ವಿವರಿಸಿದ್ದಾರೆ.

ಕಾಂಗ್ರೆಸ್‌ ಸಂಸ್ಕೃತಿಯ ಕುರಿತಾಗಿ ಅಂದೇ ಅರಿತುಕೊಂಡಿದ್ದ ಗಾಂಧೀಜಿಯವರು 1947ರಲ್ಲೇ ಸ್ವಾತಂತ್ರ್ಯಾನಂತರ ಕಾಂಗ್ರೆಸ್‌ ಅನ್ನು ವಿಸರ್ಜಿಸುವಂತೆ ಹೇಳಿದ್ದರು, ಈ ಪಕ್ಷವು ಮುಂಬರುವ ದಿನಗಳಲ್ಲಿ ದೇಶದಲ್ಲಿ ಅರಾಜಕತೆಯನ್ನು ಉಂಟುಮಾಡಬಹುದು ಎಂಬ ಕಲ್ಪನೆಯು ಗಾಂಧೀಜಿಯವರಿಗೆ ಆಗಲೇ ಮನವರಿಕೆಯಾಗಿತ್ತು ಎಂದು ಪ್ರಧಾನಿ ಅವರು ತಮ್ಮ ಬರಹದಲ್ಲಿ ಪ್ರತಿಪಾದಿಸಿಕೊಂಡಿದ್ದಾರೆ.

ಭ್ರಷ್ಟಾಚಾರ ಮತ್ತು ಕಾಂಗ್ರೆಸ್‌ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಗಂಭಿರ ಆರೋಪ ಮಾಡಿರುವ ಪ್ರಧಾನಿ ಮೋದಿ ಅವರು ಈ ದೇಶದಲ್ಲಿ ನಡೆದಿರುವ ಪ್ರಮುಖ ಹಗರಣಗಳಲ್ಲೆಲ್ಲಾ ಕಾಂಗ್ರೆಸ್‌ ಪಕ್ಷವು ಭಾಗಿಯಾಗಿದೆ ಎಂದು ಕುಟುಕಿದ್ದಾರೆ. ಇನ್ನು ಮಹಾತ್ಮಾ ಗಾಂಧೀಜಿಯವರು ವಂಶಪಾರಂಪರ್ಯ ಆಡಳಿತಕ್ಕೆ ವಿರುದ್ಧವಾಗಿದ್ದರು. ಆದರೆ ಈ ಕಾಂಗ್ರೆಸ್‌ ಪಕ್ಷವು ಅಂದಿನಿಂದ ಇವತ್ತಿನವರೆಗೂ ವಂಶಪಾರಂಪರ್ಯ ಆಡಳಿತಕ್ಕೇ ನೆಚ್ಚಿಕೊಂಡಿದೆ ಮತ್ತು ಅದರ ಹೊರತಾದ ಕಲ್ಪನೆಯನ್ನೂ ಸಹ ಆ ಪಕ್ಷದಲ್ಲಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.

ದುರ್ಬಲರಿಗೆ ಮತ್ತು ಪ್ರಬಲರಿಗೆ ಸಮಾನ ಅವಕಾಶವನ್ನು ನೀಡುವುದೇ ಪ್ರಜಾಪ್ರಭುತ್ವದ ವಿಶೇಷ ಲಕ್ಷಣ ಎಂದು ಬಾಪೂ ಅವರ ಅಭಿಪ್ರಾಯವಾಗಿತ್ತು ಆದರೆ 1975ರಲ್ಲಿ ದೇಶದಲ್ಲಿ ತುರ್ತುಪರಿಸ್ಥಿತಿಯನ್ನು ಹೇರುವ ಮೂಲಕ ಕಾಂಗ್ರೆಸ್‌ ಪಕ್ಷವು ಪ್ರಜಾಪ್ರಭುತ್ವದ ಆಶಯಗಳನ್ನೇ ಬಲಿಕೊಟ್ಟಿತ್ತು ಎಂಬ ಗಂಭೀರ ಟೀಕೆಯನ್ನು ಅವರು ತಮ್ಮ ಬ್ಲಾಗ್‌ ನಲ್ಲಿ ಮಾಡಿದ್ದಾರೆ.

ಮಾತ್ರವಲ್ಲದೇ ಕಾಂಗ್ರೆಸ್‌ ಪಕ್ಷವು ಸಂವಿಧಾನದ 356ನೇ ವಿಧಿಯನ್ನು ಹಲವಾರು ಬಾರಿ ತನಗೆ ಬೇಕಾದ ರೀತಿಯಲ್ಲಿ ಬಳಸಿಕೊಳ್ಳುವ ಮೂಲಕ ದುರುಪಯೋಗ ಮಾಡಿಕೊಂಡಿದೆ, ಇವೆಲ್ಲವೂ ಮಹಾತ್ಮಾ ಗಾಂಧೀಜಿಯವರು ಪ್ರತಿಪಾದಿಸಿದ್ದ ತತ್ವಗಳಿಗೆ ವಿರುದ್ಧವಾಗಿತ್ತು ಎಂದು ಬರೆದುಕೊಳ್ಳುವ ಮೂಲಕ ಕಾಂಗ್ರೆಸ್‌ ಪಕ್ಷದ ನಿಜ ಬಣ್ಣವನ್ನು ಬಯಲು ಮಾಡುವ ಪ್ರಯತ್ನವನ್ನು ಪ್ರಧಾನಿಯವರು ತಮ್ಮ ಈ ಬ್ಲಾಗ್‌ ಲೇಖನದಲ್ಲಿ ಮಾಡಿದ್ದಾರೆ. ತಮ್ಮ ಈ ಬ್ಲಾಗ್‌ ನ ಲಿಂಕ್‌ ಅನ್ನು ಪ್ರಧಾನಿ ಮೋದಿ ಅವರು ತಮ್ಮ ಅಧಿಕೃತ ಟ್ವಿಟ್ಟರ್‌ ಅಕೌಂಟ್‌ ನಲ್ಲೂ ಹಂಚಿಕೊಂಡಿದ್ದಾರೆ.

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.