ಕಾಶ್ಮೀರಕ್ಕೆ ತೆರಳಲು ಯತ್ನಿಸಿದ ಗುಲಾಂ ನಬಿ ಆಜಾದ್ ಗೆ ತಡೆ
Team Udayavani, Aug 8, 2019, 3:03 PM IST
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ 370 ವಿಧಿ ರದ್ದು ಹಿನ್ನೆಲೆಯಲ್ಲಿ ಕಾಶ್ಮೀರಕ್ಕೆ ಹೋಗಲು ಯತ್ನಿಸಿದ ಕಾಂಗ್ರೆಸ್ ಮುಖಂಡ, ರಾಜ್ಯಸಭೆಯ ವಿಪಕ್ಷ ನಾಯಕ ಗುಲಾಂ ನಬಿ ಆಜಾದ್ ಅವರನ್ನು ಶ್ರೀನಗರ ವಿಮಾನ ನಿಲ್ದಾಣದಲ್ಲೇ ತಡೆಯಲಾಗಿದೆ.
ಗುರುವಾರ ಬೆಳಗ್ಗೆ ಅವರು ಶ್ರೀನಗರಕ್ಕೆ ತೆರಳಿದ್ದು, ಅಲ್ಲಿನ ಪ್ರದೇಶ ಕಾಂಗ್ರೆಸ್ ಮುಖಂಡರೊಂದಿಗೆ ಮಾತುಕತೆ ನಡೆಸುವವರಿದ್ದರು. ಅವರು ವಿಮಾನ ನಿಲ್ದಾಣದಲ್ಲಿ ಇಳಿದು, ಹೊರಗೆ ಬರುತ್ತಲೇ ಭದ್ರತಾ ಪಡೆಯವರು ಅವರನ್ನು ತಡೆದರು. ಅವರೊಂದಿಗೆ ಶ್ರೀನಗರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಗುಲಾಂ ಅಹ್ಮದ್ ಮಿರ್ ಕೂಡ ಇದ್ದರು.
ಆಜಾದ್ ಅವರನ್ನು ಬಳಿಕ ಮತ್ತೆ ದಿಲ್ಲಿಗೆ ವಾಪಾಸು ಕಳುಹಿಸಲಾಗಿದೆ ಎಂದು ಮೂಲಗಳು ಹೇಳಿವೆ. ಬುಧವಾರ ಶೋಪಿಯಾನ್ ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದ್ದನ್ನು ಆಜಾದ್ ಅವರು ಟೀಕಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ