ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
Team Udayavani, Feb 2, 2020, 8:22 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ನವದೆಹಲಿ: ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಹಾಗೂ ಸಂಸದೆ ಸೋನಿಯಾ ಗಾಂಧಿ ಅವರು ಇಲ್ಲಿನ ಸರ್ ಗಂಗಾರಾಮ್ ಅಸ್ಪತ್ರೆಗೆ ದಾಖಲುಗೊಂಡಿದ್ದಾರೆ. ಆದರೆ ಅವರ ಆರೋಗ್ಯದ ವಿಚಾರದಲ್ಲಿ ಯಾವುದೆ ಕಳವಳಪಡುವ ಅಗತ್ಯವಿಲ್ಲ ಎಂದು ಮೂಲಗಳು ತಿಳಿಸಿವೆ.
ಸೋನಿಯಾ ಗಾಂಧಿ ಅವರು ಶನಿವಾರದ ಬಜೆಟ್ ಮಂಡನೆ ಕಲಾಪಕ್ಕೆ ಗೈರಾಗಿದ್ದರು.
ಸೋನಿಯಾ ಅವರು ಕಳೆದ ಒಂಭತ್ತು ವರ್ಷಗಳಿಂದ ಅಮೆರಿಕಾದಲ್ಲಿ ನಿಯಮಿತ ವೈದ್ಯಕೀಯ ಪರೀಕ್ಷೆಗೆ ಒಳಗಾಗುತ್ತಿದ್ದರು. ಹಾಗೂ ಬಹಿರಂಗಪಡಿಸದ ಕಾಯಿಲೆಗಾಗಿ ಅವರು ಈ ಹಿಂದೆ ಅಮೆರಿಕಾದಲ್ಲಿ ಯಶಸ್ವೀ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು.
ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.