‘ಒಬ್ಬ ನೈಜ ಹಿಂದೂ ರಾಮಮಂದಿರದಲ್ಲಿ ಎಂದೂ ಪ್ರಾರ್ಥಿಸಲಾರ’: ಕ್ಷಮೆ ಕೋರಿದ ನ್ಯಾಷನಲ್ ಹೆರಾಲ್ಡ್

ಸುಪ್ರೀಂ ತೀರ್ಪಿಗೆ ‘ಲಾಠಿ ಯಾರ ಕೈಯಲ್ಲಿದೆಯೋ ಅವರದ್ದೇ ಎಮ್ಮೆ’ ಎಂಬರ್ಥದ ಶೀರ್ಷಿಕೆ ನೀಡಿದ ಕಾಂಗ್ರೆಸ್ ಮುಖವಾಣಿ ನ್ಯಾಷನಲ್ ಹೆರಾಲ್ಡ್

Team Udayavani, Nov 10, 2019, 8:49 PM IST

National-Herald-Cartoon-01-10-11

ನವದೆಹಲಿ: ಕಾಂಗ್ರೆಸ್ ಪಕ್ಷದ ಮುಖವಾಣಿ ‘ನ್ಯಾಷನಲ್ ಹೆರಾಲ್ಡ್’ ಪತ್ರಿಕೆಯಲ್ಲಿ ಅಯೋಧ್ಯಾ ತೀರ್ಪಿಗೆ ಸಂಬಂಧಿಸಿದಂತೆ ಆಕ್ಷೇಪಾರ್ಹ ಬರಹ ಮತ್ತು ಕಾರ್ಟೂನ್ ಒಂದನ್ನು ಪ್ರಕಟಿಸಿದ್ದಕ್ಕಾಗಿ ಆ ಪತ್ರಿಕೆಯ ಸಂಪಾದಕರು ದೇಶವಾಸಿಗಳ ಕ್ಷಮೆ ಕೋರಿದ್ದಾರೆ. ಈ ಆಕ್ಷೇಪಾರ್ಹ ಬರಹಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು ಮಾತ್ರವಲ್ಲದೇ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಕ್ಷಮಾಪಣೆಗೆ ಆಗ್ರಹಿಸಿತ್ತು.

‘ಒಬ್ಬ ನೈಜ ಹಿಂದೂ ಅಯೋಧ್ಯೆಯ ರಾಮಮಂದಿರದಲ್ಲಿ ಎಂದೂ ಪ್ರಾರ್ಥಿಸಲಾರ’ ಎಂಬ ಶೀರ್ಷಿಕೆಯ ಬರಹಕ್ಕೆ ಪತ್ರಿಕೆಯು 1992ರ ಅಯೋಧ್ಯೆ ಮತ್ತು 2019ರ ಸುಪ್ರೀಂ ಕೋರ್ಟ್ ನ ಚಿತ್ರಗಳನ್ನೆರಡನ್ನು ಬಳಸಿಕೊಂಡು ಕೊಲಾಜ್ ರೂಪದ ವ್ಯಂಗ್ಯಚಿತ್ರ ಒಂದನ್ನು ಪ್ರಕಟಿಸಿತ್ತು.

ಮತ್ತು ಈ ವ್ಯಂಗ್ಯಚಿತ್ರಕ್ಕೆ ‘ಹೂಸ್ ಸ್ಟಿಕ್. ಹಿಸ್ ಬಫೆಲೋ’ (ಕೋಲು ಯಾರದ್ದೋ, ಅವನದ್ದೇ ಎಮ್ಮೆ) ಎಂಬ ಶೀರ್ಷಿಕೆಯನ್ನು ನೀಡಲಾಗಿತ್ತು. ಮತ್ತು ‘ಬಲವಂತವಾಗಿ, ಹಿಂಸೆಯಿಂದ ಮತ್ತು ರಕ್ತಪಾತದಿಂದ ನಿರ್ಮಿಸಲಾಗುವ ಮಂದಿರದಲ್ಲಿ ದೇವರ ಸಾನ್ನಿಧ್ಯ ಇರಲು ಸಾಧ್ಯವೇ? ಮತ್ತು ಒಂದು ವೇಳೆ ಈ ಮಂದಿರದಲ್ಲಿ ದೇವ ಸಾನ್ನಿಧ್ಯ ಬಂದರೂ ನಾವು ಅಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವೇ’ ಎಂಬ ಅರ್ಥದ ಕ್ಯಾಪ್ಷನ್ ನೀಡಲಾಗಿತ್ತು.

‘ಒಬ್ಬ ನಿಜವಾದ ಹಿಂದೂ ಅಯೋಧ್ಯೆಯ ರಾಮಮಂದಿರದಲ್ಲಿ ಎಂದೂ ಪ್ರಾರ್ಥಿಸಲಾರ’ ಎಂಬ ಶೀರ್ಷಿಕೆಯ ಲೇಖನವು ಯಾರದ್ದೇ ಭಾವನೆಗಳಿಗೆ ನೋವನ್ನುಂಟುಮಾಡಿದ್ದರೆ ಅದಕ್ಕೆ ನಾವು ಕ್ಷಮೆ ಯಾಚಿಸುತ್ತೇವೆ, ಯಾರದ್ದೇ ಭಾವನೆಗಳಿಗೆ ನೋವನ್ನುಂಟು ಮಾಡುವ ಉದ್ದೇಶ ನಮ್ಮದಾಗಿರಲಿಲ್ಲ. ಮತ್ತು ಈ ಲೇಖನದಲ್ಲಿ ವ್ಯಕ್ತವಾಗಿರುವ ಅಭಿಪ್ರಾಯಗಳು ಸಂಪೂರ್ಣವಾಗಿ ಲೇಖಕರದ್ದೇ ಹೊರತು ಪತ್ರಿಕೆಯದ್ದಲ್ಲ’ ಎಂದು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮುಖ್ಯ ಸಂಪಾದಕರು ತಮ್ಮ ಕ್ಷಮಾಪಣಾ ಬರಹದಲ್ಲಿ ತಿಳಿಸಿದ್ದಾರೆ.

ಈ ಬರಹಕ್ಕೆ ಭಾರತೀಯ ಜನತಾ ಪಕ್ಷವು ಪ್ರಬಲ ಆಕ್ಷೇಪವನ್ನು ವ್ಯಕ್ತಪಡಿಸಿತ್ತು ಮತ್ತು ಇದು ಆ ಪಕ್ಷದ ನಿಜವಾದ ನಿಲುವನ್ನು ತೋರ್ಪಡಿಸುತ್ತದೆ ಎಂದು ಬಿಜೆಪಿ ಕಿಡಿ ಕಾರಿತ್ತು. ಮತ್ತು ಸುಪ್ರೀಂ ಕೋರ್ಟಿನ ತೀರ್ಪನ್ನು ಪ್ರಶ್ನಿಸುವ ಮೂಲಕ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ದೇಶವಾಸಿಗಳಿಗೆ ಮುಜುಗರ ಉಂಟುಮಾಡಿದೆ ಎಂದು ಬಿಜೆಪಿಯ ವಕ್ತಾರ ಸಂಬಿತ್ ಪಾತ್ರ ಅವರು ಆರೋಪಿಸಿದ್ದರು.

ಭಾರತದ ಪ್ರಥಮ ಪ್ರಧಾನಿಯಾಗಿದ್ದ ಜವಹರಲಾಲ್ ನೆಹರೂ ಅವರು 1938ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಸ್ಥಾಪಿಸಿದ್ದರು. ಈ ಪತ್ರಿಕೆ ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ದೇಶವಾಸಿಗಳನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿತ್ತು.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.