ಗುಜರಾತ್ನ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ
"ಸ್ಟಾರ್' ಪಟ್ಟಿಯಲ್ಲಿ ಶಶಿ ತರೂರ್, ಮನೀಶ್ ತಿವಾರಿಗಿಲ್ಲ ಸ್ಥಾನ
Team Udayavani, Nov 16, 2022, 7:35 AM IST
ಅಹಮದಾಬಾದ್: ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಮಂಗಳವಾರ ಬಿಡುಗಡೆಗೊಳಿಸಿದೆ.
ಆದರೆ ಶಶಿ ತರೂರ್, ಆನಂದ ಶರ್ಮ, ಮನೀಶ್ ತಿವಾರಿ, ರಣದೀಪ್ ಸಿಂಗ್ ಸುಜೇìವಾಲಾ ಸೇರಿದಂತೆ ಕಾಂಗ್ರೆಸ್ನ ಕೆಲವು ಹಿರಿಯ ನಾಯಕರ ಹೆಸರುಗಳನ್ನು ಪಟ್ಟಿಯಿಂದ ಹೊರಗಿಡಲಾಗಿದೆ.
ಶಶಿ ತರೂರ್, ಆನಂದ ಶರ್ಮ, ಮನೀಶ್ ತಿವಾರಿ ಅವರು ಜಿ-23 ಗುಂಪಿನಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೇ ಪಕ್ಷದ ಸಂಘಟನಾತ್ಮಕ ಬದಲಾವಣೆ ಹಾಗೂ ಪೂರ್ಣ ಪ್ರಮಾಣದ ಅಧ್ಯಕ್ಷರ ಆಯ್ಕೆಗೆ ಆಗ್ರಹಿಸಿ ಪತ್ರ ಬರೆದಿದ್ದರು. ಅಲ್ಲದೇ ಇತ್ತೀಚೆಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶಶಿ ತರೂರ್ ಸ್ಪರ್ಧಿಸಿ, ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಪರಾಭವಗೊಂಡಿದ್ದರು.
ಇಬ್ಬರು ಕನ್ನಡಿಗರಿಗೆ ಸ್ಥಾನ:
ಕನ್ನಡಿಗರಾದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿ.ಕೆ.ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಸಿಕ್ಕಿದೆ. ಇವರಲ್ಲದೇ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಸಚಿನ್ ಪೈಲಟ್, ಜಿಗ್ನೇಶ್ ಮೆವಾನಿ, ಕನ್ನಯ್ಯಾ ಕುಮಾರ್ ಸೇರಿದಂತೆ ಅನೇಕ ನಾಯಕರು ತಾರಾ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.
ಡಿ.1 ಮತ್ತು 5ರಂದು ಎರಡು ಹಂತದಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದೆ. ಡಿ.8ರಂದು ಮತ ಎಣಿಕೆ ನಡೆದು, ಫಲಿತಾಂಶ ಹೊರಬೀಳಲಿದೆ.
1995ರಿಂದ ಸತತವಾಗಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತಿದೆ. ಕೇಸರಿ ಪಕ್ಷದ ಓಟಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ಮತ್ತು ಆಪ್ ಮುಂದಾಗಿದೆ.
ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಈ ಹಿಂದಿನ ಎಲ್ಲಾ ದಾಖಲೆಗಳನ್ನು ಪುಡಿಗಟ್ಟಲಿದೆ. ಅತಿ ಹೆಚ್ಚಿನ ಸ್ಥಾನಗಳು ಮತ್ತು ಮತಗಳನ್ನು ಪಕ್ಷ ಪಡೆಯಲಿದೆ.
– ಅಮಿತ್ ಶಾ, ಕೇಂದ್ರ ಗೃಹ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!