ರಾಹುಲ್ ರ ಟ್ವೀಟರ್ ಖಾತೆಯನ್ನು ಬ್ಲಾಕ್ ಮಾಡಬಹುದು, ಅವರ ಜನ ಪರ ಧ್ವನಿಯನ್ನಲ್ಲ: ಕಾಂಗ್ರೆಸ್

Team Udayavani, Aug 9, 2021, 11:01 AM IST

Congress to protest ‘temporary suspension’ of Rahul Gandhi’s Twitter account

ನವ ದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅಧಿಕೃತ ಟ್ವೀಟರ್ ಖಾಎಯನ್ನು ತಾತ್ಕಾಲಿಕವಾಗಿ ಅಮಾನತು ಮಾಡಿದಕ್ಕಾಗಿ ರಾಷ್ಟ್ರೀಯ ಯುವ ಕಾಂಗ್ರೆಸ್ ಹಾಗು ಎನ್ ಎಸ್ ಯು ಐ (ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಇಂದು (ಸೋಮವಾರ, ಆಗಸ್ಟ್ 9) ದೇಶದಾದ್ಯಂತ ಪ್ರತಿಭಟನೆ ಮಾಡಲು ಮುಂದಾಗಿವೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್, ನಮ್ಮ ನಾಯಕ ರಾಹುಲ್ ಗಾಂಧಿ ಅವರ ಟ್ವೀಟರ್ ಖಾತೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದ್ದರೂ ಕೂಡ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಜನರ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದಿದೆ.

ಇದನ್ನೂ ಓದಿ : ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 35,499 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಇಳಿಕೆ

ದೆಹಲಿಯಲ್ಲಿ ಇತ್ತೀಚೆಗೆ ಅಪ್ರಾಪ್ತೆಯ ಅತ್ಯಾಚಾರ ಮತ್ತು ಕೊಲೆ ಸಂತ್ರಸ್ತೆಯ ಪೋಷಕರನ್ನು  ಭೇಟಿಯಾಗಿದ್ದರು, ಮತ್ತು ಅವರೊಂದಿಗೆ  ಮಾತಾಡುತ್ತಿರುವಾಗ ತೆಗೆಸಿಕೊಂಡಿದ್ದ ಫೋಟೋವನ್ನು ತನ್ನ ಅಧಿಕೃತ ಟ್ವೀಟರ್ ಖಾತೆಯ ಮೂಲಕ ರಾಹುಲ್ ಗಾಂಧಿ ಪೋಸ್ಟ್ ಮಾಡಿದ್ದರು. ಪೋಷಕರ ಗುರುತನ್ನು ಬಹಿರಂಗಪಡಿಸುವ ರಾಹುಲ್ ಗಾಂಧಿಯವರ ಟ್ವೀಟ್ ಅನ್ನು ಟ್ವಿಟರ್ ಶುಕ್ರವಾರ ತೆಗೆದುಹಾಕಿದೆ.

ಟ್ವೀಟರ್ ತೆಗೆದುಕೊಂಡ ಈ ಕ್ರಮವನ್ನು ಕೇಂದ್ರ ಸರ್ಕಾರದ ಒತ್ತಡದಿಂದ ಇದನ್ನು ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿರುವ ಟ್ವೀಟರ್ ಕಚೇರಿಯ ಮುಂಭಾಗದಲ್ಲಿ ಕಾಂಗ್ರೆಸ್ ಸ್ಟೂಡೆಂಟ್ಸ್ ವಿಂಗ್ ಪ್ರತಿಭಟನೆ ಮಾಡುವುದಾಗಿ ಹಾಗೂ ಎನ್ ಎಸ್ ಯು ಐ ಸಂಸತ್ ಭವನದ ಸುತ್ತ ಮುತ್ತ ಪ್ರತಿಭಟನೆ ನಡೆಸುವುದಾಗಿ ಘೋಷಿಸಿವೆ ಎಂದು ಸುದ್ದಿ ಸಂಸ್ಥೆ ಎಎನ್ ಐ ವರದಿ ಮಾಡಿದೆ.

ನಿರಂತರವಾಗಿ ಕೇಂದ್ರ ಸರ್ಕಾರದ ಮೇಲೆ ಟ್ವೀಟರ್ ಖಾತೆಯ ಮೂಲಕ ವಾಗ್ದಾಳಿ ಮಾಡುತ್ತಿದ್ದ ರಾಹುಲ್ ಗಾಂಧಿ, ಎರಡು ದಿನಗಳ ತಾತ್ಕಾಲಿಕ ಅಮಾನತುಗೊಳಿಸಿರುವ ಕಾರಣದಿಂದಾಗಿ ಯಾವುದೇ ಟ್ವಿಟ್ ಮಾಡುವುದಕ್ಕೆ ಆಗಿರಲಿಲ್ಲ. ಕಾಂಗ್ರೆಸ್ ಶನಿವಾರ ತಡರಾತ್ರಿ ಈ ಮಾಹಿತಿಯನ್ನು ನೀಡಿದೆ, ಜೊತೆಗೆ ಖಾತೆಯನ್ನು ಮರುಸ್ಥಾಪಿಸುವ ಪ್ರಕ್ರಿಯೆಯನ್ನು ಮಾಡಲಾಗುತ್ತಿದೆ ಎಂದು ಹೇಳಿತ್ತು.

ಪಕ್ಷದ ನಾಯಕರು ಟ್ವಿಟರ್ ಮತ್ತು ಕೇಂದ್ರ ಸರ್ಕಾರವನ್ನು ಗುರಿಯಾಗಿಸಲು ಆರಂಭಿಸಿದರು, ಆದರೆ ಕಾಂಗ್ರೆಸ್ ಕಾರ್ಯಕರ್ತರು “ಮುಖ್ಯ ಭೀ ರಾಹುಲ್” ಪ್ರವೃತ್ತಿಯನ್ನು ಆರಂಭಿಸಿದರು.

ಇನ್ನು, ಈ ಬಗ್ಗೆ ಪ್ರತಿಕ್ರಿಯಿಸಿದ ಎನ್ ಎಸ್ ಯು ಐ ನ ಮುಖ್ಯಸ್ಥ ನೀರಜ್ ಕುಂದನ್, ಬಿಜೆಪಿ ಸರ್ಕಾರದ ‘ಬೆದರಿಕೆ ರಾಜಕಾರಣ’ ಮಿತಿ ಮೀರುತ್ತಿದೆ.  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವೀಟರ್ ಖಾತೆಯನ್ನು  ಅಮಾನತುಗೊಳಿಸಲು ಟ್ವಿಟರ್ ಮೇಲೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಒತ್ತಡ  ಹೇರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ನ ಯುವ ಕಾಂಗ್ರೆಸ್ ನ ಅಧ್ಯಕ್ಷ ಶ್ರೀನಿವಾಸ್ ಬಿ ವಿ ಪ್ರತಿಕ್ರಯಿಸಿ, ಟ್ವೀಟರ್ ಇಂಡಿಯಾ ಕೇಂದ್ರ ಸರ್ಕಾರದ ನಿರ್ದೇಶನದಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಟ್ವೀಟರ್ ಇಂಡಿಯಾ ರಾಹುಲ್ ಗಾಂಧಿ ಅವರ ಖಾತೆಯನ್ನು ಬ್ಲಾಕ್ ಮಾಡಬಹುದು ಆದರೇ, ಅವರ ಜನ ಪರ ಧ್ವನಿಯನ್ನು ನಿಲ್ಲಿಸಲು ಸಾಧ್ಯವಿಲ್ಲ. ರಾಹುಲ್ ಗಾಂಧಿ ನಿರಂತರವಾಗಿ ಬಡ ಜನರ ಧ್ವನಿಯಾಗಿ, ಸಮಾಜದ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತಾರೆ. ನಾವೆಲ್ಲಾ ಅವರ ಬೆಂಬಲಕ್ಕಾಗಿ ಇದ್ದೇವೆ ಎಂದಿದ್ದಾರೆ.

ಸದ್ಯ, ರಾಹುಲ್ ಗಾಂಧಿ ಅವರ ಟ್ವೀಟರ್ ಖಾತೆ ಜಾಲ್ತಿಯಲ್ಲಿದೆ.

ಇದನ್ನೂ ಓದಿ : ಸಚಿವರಿಗೆ ಜನರ ಸಂಕಷ್ಟ ಪರಿಹಾರವಾಗಬೇಕಿಲ್ಲ, ವಿಜಯೋತ್ಸವಗಳು ಬೇಕು: ಕುಮಾರಸ್ವಾಮಿ ಕಿಡಿ

ಟಾಪ್ ನ್ಯೂಸ್

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.