10 ದಿನಗಳಲ್ಲಿ ರೈತರ ಸಾಲ ಮನ್ನಾ: ರಾಹುಲ್‌ ಭರವಸೆ

Team Udayavani, Jun 7, 2018, 6:25 AM IST

ಮಂದಸೌರ್‌/ಹೊಸದಿಲ್ಲಿ: ‘ಮಧ್ಯಪ್ರದೇಶದಲ್ಲಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಹತ್ತು ದಿನಗಳಲ್ಲಿ ರೈತರ ಸಾಲ ಮನ್ನಾ ಮಾಡುತ್ತೇವೆ’ ಹೀಗೆಂದು ವಾಗ್ಧಾನ ಕೊಟ್ಟದ್ದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ. ಮಧ್ಯಪ್ರದೇಶದಲ್ಲಿ ಒಂದು ವರ್ಷದ ಹಿಂದೆ ಪೊಲೀಸ್‌ ಗೋಲಿಬಾರ್‌ ನಲ್ಲಿ ಅಸುನೀಗಿದ ಐವರು ರೈತರ ಸ್ಮರಣಾರ್ಥ ಮತ್ತು ಮುಂದಿನ ವಿಧಾನಸಭೆ ಚುನಾವಣೆ ಪ್ರಯುಕ್ತ ಬುಧವಾರ ಆಯೋಜಿಸಲಾಗಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಧ್ಯಪ್ರದೇಶದಲ್ಲಿನ ರೈತರ ಪರಿಸ್ಥಿತಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳೇ ಕಾರಣ ಎಂದು ರಾಹುಲ್‌ ಟೀಕಿಸಿದ್ದಾರೆ. ‘ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಹತ್ತು ದಿನಗಳ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡಲಾಗುತ್ತದೆ’ ಎಂದು ಘೋಷಿಸಿದ್ದಾರೆ. ಪ್ರಧಾನಿ ಮೋದಿ ವಿರುದ್ಧ ಟೀಕಾ ಪ್ರಕಾರ ನಡೆಸಿದ ಅವರು ‘ಮೇಕ್‌ ಇನ್‌ ಇಂಡಿಯಾ ವಿಫ‌ಲವಾಗಿದೆ ಎಂದರು.

ತಿರುಗೇಟು: ರಾಹುಲ್‌ ಹೇಳಿರುವ 15 ಉದ್ಯಮಪತಿಗಳ 2.5 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ ವಿಚಾರ ಸುಳ್ಳು ಎಂದು ಕೇಂದ್ರ ಸಚಿವ ಅರುಣ್‌ ಜೇಟ್ಲಿ ಫೇಸ್‌ ಬುಕ್‌ ನಲ್ಲಿ ಹೇಳಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ