ಮೋದಿ ಹತ್ಯೆಗೆ ಸಂಚು? ಕೊಯಮತ್ತೂರಿನಲ್ಲಿ ವ್ಯಕ್ತಿಯ ಬಂಧನ, ವಿಚಾರಣೆ
Team Udayavani, Apr 25, 2018, 5:20 AM IST
ಕೊಯಮತ್ತೂರು: ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ನಡೆದಿದೆಯೇ? ಹೌದು ಎನ್ನುತ್ತಿದೆ ಈ ವರದಿ. 1998ರ ಕೊಯಮತ್ತೂರು ಸರಣಿ ಸ್ಫೋಟದಲ್ಲಿ ಶಿಕ್ಷೆ ಅನುಭವಿಸಿದ್ದ ಮೊಹಮ್ಮದ್ ರಫೀಕ್ ನನ್ನು ಈಗ ಇಂಥದ್ದೊಂದು ಆರೋಪದ ಮೇಲೆ ಸೋಮವಾರ ರಾತ್ರಿ ಬಂಧಿಸಲಾಗಿದೆ. ಗುತ್ತಿಗೆದಾರನೊಬ್ಬನ ಜತೆಗಿನ ಫೋನ್ ಸಂಭಾಷಣೆ ವೇಳೆ ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡಲು ನಿರ್ಧರಿಸಲಾಗಿದೆ ಎಂಬ ಅಂಶವನ್ನು ರಫೀಕ್ ಹೇಳಿದ್ದಾಗಿ ಕೊಯಮತ್ತೂರು ಪೊಲೀಸರು ತಿಳಿಸಿದ್ದಾರೆ.
8 ನಿಮಿಷಗಳ ಸಂಭಾಷಣೆಯ ಈ ಧ್ವನಿಮುದ್ರಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರಿಗೆ ಗುತ್ತಿಗೆದಾರ ಪ್ರಕಾಶ್ ಅವರ ಜತೆ ಫೋನ್‌ನಲ್ಲಿ ಮಾತನಾಡುವಾಗ ರಫೀಕ್ ಈ ಅಂಶ ಹೇಳಿದ್ದು, ಆತನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಗುತ್ತಿಗೆದಾರನನ್ನು ಬೆದರಿಸಲು ಹೀಗೆ ಹೇಳಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ರಫೀಕ್ ವಿರುದ್ಧ ಕೊಲೆ ಬೆದರಿಕೆ ಪ್ರಕರಣ ದಾಖಲಿಸಿದ್ದು, ಹೆಚ್ಚಿನ ತನಿಖೆಗೆ ವಿಶೇಷ ತಂಡ ರಚಿಸಲಾಗಿದೆ.
ರಫೀಕ್ ಹೇಳಿದ್ದೇನು?: ಸಂಭಾಷಣೆ ವೇಳೆ ರಫೀಕ್, ‘1998ರಲ್ಲಿ ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ನಗರಕ್ಕೆ ಭೇಟಿ ನೀಡಿದ್ದಾಗಲೂ ಬಾಂಬ್ ಇರಿಸಿದ್ದೆ. ನನ್ನ ವಿರುದ್ಧ ಹಲವು ಕೇಸುಗಳಿದ್ದು, 100ಕ್ಕೂ ಹೆಚ್ಚು ವಾಹನಗಳನ್ನು ಧ್ವಂಸ ಮಾಡಿರುವೆ’ ಎಂದು ಹೇಳಿದ್ದಾನೆ. ಈತ ಕೊಯಮತ್ತೂರಿನ ಕುಣಿಯಮತ್ತೂರು ಪ್ರದೇಶದ ನಿವಾಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ