ಸಂಸತ್‌ನಲ್ಲಿ ಕೋಲಾಹಲ

Team Udayavani, Jul 10, 2019, 6:00 AM IST

ನವದೆಹಲಿ: ರಾಜ್ಯದಲ್ಲಿನ ರಾಜಕೀಯ ಹೈಡ್ರಾಮಾ ಸಂಸತ್‌ನಲ್ಲಿ ಪ್ರತಿಧ್ವನಿಸಿದ್ದೂ ಅಲ್ಲದೇ, ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ವಾಕ್ಸಮರಕ್ಕೂ ಕಾರಣವಾಯಿತು.

ಲೋಕಸಭೆಯಲ್ಲಿ ಕಾಂಗ್ರೆಸ್‌ ಸದಸ್ಯರು ಕಲಾಪ ಬಹಿಷ್ಕರಿಸಿ ಹೊರನಡೆದರೆ, ರಾಜ್ಯಸಭೆಯಲ್ಲಿ ತೀವ್ರ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು. ಅಚ್ಚರಿಯೆಂದರೆ, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರೂ ಇತರೆ ಸದಸ್ಯರ ಜತೆಗೂಡಿ ಘೋಷಣೆಗಳನ್ನು ಕೂಗಿದ್ದು ಕಂಡುಬಂತು.

ಲೋಕಸಭೆಯ ಶೂನ್ಯ ವೇಳೆಯಲ್ಲಿ ಕರ್ನಾಟಕದ ಬಿಕ್ಕಟ್ಟು ಕುರಿತು ಚರ್ಚಿಸಲು ಅವಕಾಶ ನೀಡುವಂತೆ ಕಾಂಗ್ರೆಸ್‌ ಕೇಳಿಕೊಂಡಿತಾದರೂ ಅದಕ್ಕೆ ಸ್ಪೀಕಲ್ ಓಂ ಬಿರ್ಲಾ ಅವಕಾಶ ಕಲ್ಪಿಸಲಿಲ್ಲ. ಸೋಮವಾರವೇ ಈ ವಿಚಾರದ ಚರ್ಚೆ ನಡೆದಿರುವ ಕಾರಣ, ಮತ್ತೂಮ್ಮೆ ಅವಕಾಶ ನೀಡಲ್ಲ ಎಂದು ಸ್ಪಷ್ಟವಾಗಿ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಲೋಕಸಭೆ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ, ‘ಕರ್ನಾಟಕ ಸರ್ಕಾರವನ್ನು ಬಿಜೆಪಿ ಟಾರ್ಗೆಟ್ ಮಾಡುತ್ತಿದೆ. ಶಾಸಕರ ಕುದುರೆ ವ್ಯಾಪಾರದಲ್ಲಿ ಬಿಜೆಪಿ ತೊಡಗಿದೆ’ ಎಂದು ಆರೋಪಿಸಿದರು.

ಅದಕ್ಕೆ ಉತ್ತರಿಸಿದ ಗೃಹ ಸಚಿವ ರಾಜನಾಥ್‌ ಸಿಂಗ್‌, ಕರ್ನಾಟಕದ ಬಿಕ್ಕಟ್ಟು ಕಾಂಗ್ರೆಸ್‌ನ ಆಂತರಿಕ ಸಮಸ್ಯೆ. ತನ್ನ ಮನೆಯನ್ನು ಸರಿಯಾಗಿ ಇಟ್ಟುಕೊಳ್ಳಲು ಆಗದ ಕಾಂಗ್ರೆಸ್‌, ಈಗ ಲೋಕಸಭೆಯಲ್ಲಿ ಕಲಾಪಕ್ಕೆ ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಿದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ