ಮಹಾರಾಷ್ಟ್ರದ ನಂದುರ್ಬಾರ್ ಗೆ 94 ಕೋವಿಡ್ ಕೇರ್ ಬೋಗಿಗಳನ್ನು ನೀಡಿದ ಕೇಂದ್ರ ರೈಲ್ವೆ!
Team Udayavani, Apr 18, 2021, 2:40 PM IST
ನವದೆಹಲಿ : ದೇಶಾದ್ಯಂತ ಕೋವಿಡ್ ಎರಡನೇ ಅಲೆ ಜನರನ್ನು ತಲ್ಲಣಗೊಳಿಸುತ್ತಿದ್ದು, ಇದನ್ನು ನಿಯಂತ್ರಣ ಮಾಡುವ ದೃಷ್ಟಿಯಿಂದ ಸರ್ಕಾರ ಕೂಡ ಹೋರಾಟ ಮಾಡುತ್ತಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದೇ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆ ಇಲಾಖೆಯು ಮಹಾರಾಷ್ಟ್ರದ ನಂದುರ್ಬಾರ್ ಜಿಲ್ಲೆಗೆ 94 ಕೋವಿಡ್ ಕೇರ್ ಕೋಚ್ ಗಳನ್ನು ನೀಡಿದೆ. ದೇಶದಲ್ಲಿ ಈಗಾಗಲೇ 4000 ಕೋವಿಡ್ ಕೇರ್ ಬೋಗಿಗಳು ಕಾರ್ಯ ನಿರ್ವಹಿಸುತ್ತಿವೆ.
ಈಗಾಗಲೇ ನಂದುರ್ಬಾರ್ ಜಿಲ್ಲೆಯಿಂದ ಈ ಕೋವಿಡ್ ಕೇರ್ ಕೋಚ್ ಗಳಿಗೆ ಆರು ಮಂದಿ ದಾಖಲಾಗಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ ಇಲ್ಲಿಯ ವರೆಗೆ ಮೊದಲ ಬಾರಿಗೆ ಕೋವಿಡ್ ಕೇರ್ ಕೋಚ್ ಗಳ ರೈಲುಗಳನ್ನು ಕೊಡಿ ಎಂದು ಮಹಾರಾಷ್ಟ್ರ ಸರ್ಕಾರ ಮಾತ್ರ ಕೇಳಿದೆಯಂತೆ. ಈ ಕಾರಣದಿಂದ ಕೇಂದ್ರ ರೈಲ್ವೆ ಇಲಾಖೆಯು 94 ಕೋವಿಡ್ ಕೇರ್ ಕೋಚ್ ಗಳನ್ನು ನೀಡಿದೆ.
ಸದ್ಯ ನೀಡಿರುವ ಕೋಚ್ ಗಳಲ್ಲಿ ಅತೀ ಕಡಿಮೆ ಪ್ರಮಾಣ ಸೋಂಕು ತಗುಲಿರುವ ವ್ಯಕ್ಯಿಗಳನ್ನು ಮಾತ್ರ ದಾಖಲಿಸಲಾಗುತ್ತೆ ಎಂದು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇನ್ನು ಕಳೆದ ವರ್ಷ ಕೂಡ ದೆಹಲಿ, ಉತ್ತರ ಪ್ರದೇಶ, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಮಧ್ಯ ಪ್ರದೇಶದಲ್ಲಿ ಕೋವಿಡ್ ಕೇರ್ ಸೆಂಟರ್ ಗಳಾಗಿ ರೈಲುಗಳ ಬೋಗಿಗಳನ್ನು ಬಳಕೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ