ಶಿಕ್ಷಣ ಕ್ಷೇತ್ರ ಅವ್ಯವಸ್ಥೆ ಸರಿಪಡಿಸಿ: ಸುಪ್ರೀಂ

Team Udayavani, Jun 5, 2019, 6:00 AM IST

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿರುವ ಎಲ್ಲಾ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಎಲ್ಲಾ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. ಮಹಾರಾಷ್ಟ್ರದಲ್ಲಿ 2019-20ನೇ ಶೈಕ್ಷಣಿಕ ವರ್ಷಕ್ಕಾಗಿ ವೈದ್ಯಕೀಯ ಸ್ನಾತಕೋತ್ತರ ಹಾಗೂ ದಂತ ವೈದ್ಯ ಕೋರ್ಸ್‌ಗಳ ದಾಖಲಾತಿಗೆ ಸಂಬಂಧಿಸಿದ ವಿಚಾರಣೆ ನಡೆಸುವಾಗ ಈ ಸಲಹೆ ನೀಡಿದೆ. ದಾಖಲಾತಿ ವೇಳೆ ವಿದ್ಯಾರ್ಥಿಗಳು ಎದುರಿಸುವ ಮಾನಸಿಕ ಒತ್ತಡ, ಅನಿಶ್ಚಿತತೆಗಳ ಬಗ್ಗೆ ನ್ಯಾಯಾಲಯ ಕಾಳಜಿ ಹೊಂದಿದೆ. ವಿದ್ಯಾರ್ಥಿ ಗಳ ಇಂಥ ಒತ್ತಡ ಕಡಿಮೆ ಮಾಡಲು, ದಾಖಲಾತಿಯಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿಸಬೇಕು ಎಂದು ಹೇಳಿದೆ.

ಮಹಾರಾಷ್ಟ್ರಕ್ಕೆ ಸೂಚನೆ: ಇದೇ ವೇಳೆ, ಮಹಾ ರಾಷ್ಟ್ರದಲ್ಲಿ ವೈದ್ಯಕೀಯ ಸ್ನಾತಕೋತ್ತರ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಹೊಸ ದಾಖಲಾತಿ ಬಗ್ಗೆ ಯಾವುದೇ ಹೊಸ ಆದೇಶ ನೀಡಲು ನಿರಾಕರಿಸಿದ ಕೋರ್ಟ್‌, ಜೂನ್‌ 14ರೊಳಗೆ ಅಂತಿಮ ಸುತ್ತಿನ ದಾಖಲಾತಿ ಪ್ರಕ್ರಿಯೆ ನಡೆಸುವಂತೆ ಸೂಚಿಸಿತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ