ಸ್ತ್ರೀ ಬೆಂಬಲವಿಲ್ಲದೆ ದೇಶದ ಪ್ರಗತಿ ಅಸಾಧ್ಯ
Team Udayavani, Sep 30, 2018, 6:00 AM IST
ಜೈಪುರ: ಮಹಿಳೆಯರ ಬೆಂಬಲವಿಲ್ಲದೇ ದೇಶ ಪ್ರಗತಿ ಕಾಣಲು ಸಾಧ್ಯವಿಲ್ಲ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಶನಿವಾರ ರಾಜಸ್ಥಾನದ ಜೈಪುರದಲ್ಲಿನ ಇಂದಿರಾಗಾಂಧಿ ಪಂಚಾಯತಿ ರಾಜ್ ಸಂಸ್ಥಾ ನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮಹಿಳೆಯರು ಪುರುಷರಿಗಿಂತ ಯಾವುದರಲ್ಲೂ ಕಮ್ಮಿಯಿಲ್ಲ. ಅವರ ಬೆಂಬಲವಿಲ್ಲದೇ ದೇಶ ಅಭಿವೃದ್ಧಿ ಕಾಣಲು ಸಾಧ್ಯವಿಲ್ಲ. ಜನರು ತಮ್ಮ ಮನಸ್ಥಿತಿಗಳನ್ನು ಬದಲಾಯಿಸಿಕೊಂಡು, ಹೆಣ್ಣುಮಕ್ಕಳನ್ನು ಆಳುಗಳೆಂದು ಭಾವಿಸುವ ಬದಲು ಅವರನ್ನು ದೇವತೆಗಳೆಂದು ಪೂಜಿಸಬೇಕು ಎಂದು ಹೇಳಿದ್ದಾರೆ.
ಮಹಿಳೆಯರು ಕೌಟುಂಬಿಕ ವ್ಯವಹಾರಗಳನ್ನು ನಿಭಾಯಿಸುವುದರ ಜೊತೆಗೆ, ಪ್ರಮುಖ ಕ್ಷೇತ್ರಗಳಲ್ಲೂ ನಾಯಕರಾಗಿ ಹೊರಹೊ ಮ್ಮುತ್ತಿ ದ್ದಾರೆ. ಇದೊಂದು ಧನಾತ್ಮಕ ಬೆಳವಣಿಗೆ ಎಂದೂ ಭಾಗವತ್ ಹೇಳಿದ್ದಾರೆ. ಜತೆಗೆ, ಮಹಿಳೆಯರ ಸುರಕ್ಷತೆಗಾಗಿ ಕಠಿಣ ಕಾನೂನು ತರುವ ಅಗತ್ಯವಿದೆ. ಆದರೆ, ಕಾನೂನಿಗೆ ಅದರದೇ ಆದ ಮಿತಿಗಳಿರುವ ಕಾರಣ, ಜನರೇ ಸಾಮಾಜಿಕ ಜಾಗೃತಿಯನ್ನು ಮೂಡಿಸಿ, ಸಮಾಜದಲ್ಲಿ ಉತ್ತಮ ಮೌಲ್ಯಗಳನ್ನು ಬಿತ್ತಬೇಕು ಎಂದೂ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ