ಭಾರತದಲ್ಲಿಂದು 41,157 ಹೊಸ ಕೋವಿಡ್ ಪ್ರಕರಣಗಳು ಪತ್ತೆ: 518 ಮಂದಿ ಸೋಂಕಿತರು ಸಾವು
Team Udayavani, Jul 18, 2021, 10:20 AM IST
ಹೊಸದಿಲ್ಲಿ: ದೇಶದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 41,157 ಮಂದಿ ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಈ ಅವಧಿಯಲ್ಲಿ 518 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಈ ಅವಧಿಯಲ್ಲಿ 42,004 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿದ್ದಾರೆ. ಇದುವರೆಗೆ ದೇಶದಲ್ಲಿ 3,02,69,796 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಐದು ರಾಜ್ಯಗಳಲ್ಲಿ ಹೆಚ್ಚಿನ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಕೇರಳ ರಾಜ್ಯದಲ್ಲಿ 16,148 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 8172 ಸೋಂಕು ಪ್ರಕರಣಗಳು, ಆಂಧ್ರ ಪ್ರದೇಶದಲ್ಲಿ 2,672 ಪ್ರಕರಣಗಳು, ತಮಿಳುನಾಡಿನಲ್ಲಿ 2205 ಪ್ರಕರಣಗಳು ಮತ್ತು ಒಡಿಶಾ ರಾಜ್ಯದಲ್ಲಿ 2182 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.
ಇದನ್ನೂ ಓದಿ:ಸುಪ್ರೀಂ ಎಚ್ಚರಿಕೆ: ಕನ್ವರ್ ಯಾತ್ರೆಯನ್ನು ರದ್ದುಗೊಳಿಸಿದ ಉತ್ತರ ಪ್ರದೇಶ ಸರ್ಕಾರ
ಈ ಐದು ರಾಜ್ಯಗಳಲ್ಲೇ ದೇಶದ 76.25 ಶೇ ಸೋಂಕು ಪ್ರಕರಣಗಳು ಪತ್ತೆಯಾಗುತ್ತಿದೆ. ಕೇರಳ ರಾಜ್ಯವೊಂದೇ ದೇಶದ ಶೇ. 39.24 ರಷ್ಟು ಸೋಂಕು ಪ್ರಕರಣಗಳಿಗೆ ಕಾರಣವಾಗಿದೆ.
24 ಗಂಟೆ ಅವಧಿಯಲ್ಲಿ 518 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ. ಅದರಲ್ಲೂ ಮಹಾರಾಷ್ಟ್ರಲ್ಲಿ 124 ಮಂದಿ ಸೋಂಕಿತರು ಮರಣ ಹೊಂದಿದರೆ, ಕೇರಳದಲ್ಲಿ 114 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!