ಭಾರತದಲ್ಲಿ 24 ಗಂಟೆಯಲ್ಲಿ 6,093 ಕೋವಿಡ್ ಸೋಂಕು ಪ್ರಕರಣ ಪತ್ತೆ, 33 ಮಂದಿ ಸಾವು
ಕೋವಿಡ್ 19 ಸೋಂಕು ಪ್ರಕರಣದಿಂದ ಗುಣಮುಖರಾದವರ ಒಟ್ಟು ಸಂಖ್ಯೆ 4,39,06,972 ಕೋಟಿಗೆ ಏರಿಕೆಯಾಗಿದೆ.
Team Udayavani, Sep 9, 2022, 10:25 AM IST
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 6093 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, 33 ಮಂದಿ ಕೋವಿಡ್ ನಿಂದ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಸೆ.09) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ದೇವರ ದರ್ಶನಕ್ಕೆ ಫ್ಯಾನ್ಸ್ ರೆಡಿ: ಲಕ್ಕಿಮ್ಯಾನ್ ವಿಶೇಷ ಪಾತ್ರದಲ್ಲಿ ಪುನೀತ್ ರಾಜ್ಕುಮಾರ್
ದೇಶದಲ್ಲಿನ ಕೋವಿಡ್ ಚೇತರಿಕೆ ಪ್ರಮಾಣ ಶೇ.98.70ರಷ್ಟಿದೆ. ಈವರೆಗೆ ದೇಶಾದ್ಯಂತ ಕೋವಿಡ್ 19 ಸೋಂಕು ಪ್ರಕರಣದಿಂದ ಗುಣಮುಖರಾದವರ ಒಟ್ಟು ಸಂಖ್ಯೆ 4,39,06,972 ಕೋಟಿಗೆ ಏರಿಕೆಯಾಗಿದೆ.
ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 49,636ಕ್ಕೆ ಇಳಿಕೆಯಾಗಿದೆ. ಗುರುವಾರ ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 50,342ರಷ್ಟಿತ್ತು ಎಂದು ಸಚಿವಾಲಯ ತಿಳಿಸಿದೆ. ಒಂದೇ ದಿನದಲ್ಲಿ 706 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ.
ದೇಶದಲ್ಲಿ ಒಂದೇ ದಿನದಲ್ಲಿ 33 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಕೋವಿಡ್ ನಿಂದ ಸಾವನ್ನಪ್ಪಿರುವವ ಒಟ್ಟು ಸಂಖ್ಯೆ 5,28,121ಕ್ಕೆ ತಲುಪಿದೆ. 2020ರ ಮಾರ್ಚ್ ನಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವ ಮೊದಲ ಪ್ರಕರಣ ವರದಿಯಾಗಿತ್ತು.
ಪ್ರತಿದಿನದ ಪಾಸಿಟಿವಿಟಿ ದರ ಶೇ.1.96ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.1.88ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. 24 ಗಂಟೆಯ ಅವಧಿಯಲ್ಲಿ 36,31,977 ಲಕ್ಷ ಕೋವಿಡ್ ಡೋಸ್ ನೀಡಲಾಗಿದ್ದು, ಇದರೊಂದಿಗೆ ದೇಶಾದ್ಯಂತ ಈವರೆಗೆ 2,14,27,81,911 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
MUST WATCH
ಹೊಸ ಸೇರ್ಪಡೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!