ಕ್ವಾರಂಟೈನ್ ನಿಂದ ತಪ್ಪಿಸಿಕೊಂಡು ಪ್ರೇಯಸಿ ಮನೆಯಲ್ಲಿ ಇದ್ದ ಯುವಕ ಅಂದರ್
Team Udayavani, Mar 28, 2020, 5:46 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕ್ವಾರಂಟೈನ್ ನಿಂದ ತಪ್ಪಿಸಿಕೊಂಡ 24 ವರ್ಷದ ಯುವಕನೊಬ್ಬನನ್ನು ಆತನ ಪ್ರೇಯಸಿಯ ಮನೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ದುಬೈನಿಂದ ಕೆಲ ದಿನಗಳ ಹಿಂದೆ ಬಂದಿದ್ದ ತಮಿಳುನಾಡು ಯುವಕನನ್ನು ಕ್ವಾರಂಟೈನ್ ನಲ್ಲಿ ಇಡಲಾಗಿತ್ತು. ಆದರೆ ಅಲ್ಲಿಂದ ತಪ್ಪಿಸಿಕೊಂಡ ಯುವಕ ಎಲ್ಲರ ಕಣ್ತಪ್ಪಿಸಿ ತನ್ನ ಪ್ರೇಯಸಿಯ ಮನೆಯಲ್ಲಿ ಸೇರಿಕೊಂಡಿದ್ದ.
ಬಳಿಕ ಆತನನ್ನು ಪತ್ತೆ ಹಚ್ಚಿದ ಪೊಲೀಸರು ಯುವಕನನ್ನು ಹುಡುಗಿಯ ಮನೆಯಲ್ಲಿ ಬಂಧಿಸಿದರು. ಹುಡುಗಿಯ ಪೋಷಕರು ಮನೆಯಲ್ಲಿ ತಮ್ಮಿಬ್ಬರ ನಡುವಿನ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದರಿಂದ, ಹೀಗೆ ಮಾಡಿದ್ದೇನೆ ಎಂದು ವಿಚಾರಣೆ ವೇಳೆ ಹುಡುಗ ಬಾಯಿಬಿಟ್ಟಿದ್ದಾನೆ. ಸದ್ಯ ಹುಡುಗನ ವಿರುದ್ದ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಹುಡುಗಿಯನ್ನು ಐಸೋಲೇಶನ್ಗೆ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ