ಕೋವಿಡ್ ಸೋಂಕಿತೆಗೆ ಗೋಮೂತ್ರ ಕುಡಿಸಿದ ರಾಜಕಾರಣಿ
Team Udayavani, May 1, 2021, 2:23 PM IST
ನವದೆಹಲಿ: ವೆಂಟಿಲೇಟರ್ನಲ್ಲಿರುವ ಮಹಿಳಾ ಕೋವಿಡ್ ಸೋಂಕಿತರೊಬ್ಬರಿಗೆ ರಾಜಕಾರಣಿಯೊಬ್ಬರು ಒತ್ತಾಯಪೂರ್ವಕವಾಗಿ ಗೋಮೂತ್ರ ಕುಡಿಸಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಮಹಿಳೆಯನ್ನು ವೆಂಟಿಲೇಟರ್ನಲ್ಲಿಡಲಾಗಿತ್ತು, ಆವರಿಗೆ ರಾಜಕಾರಣಿಯೊಬ್ಬರು ಗೋಮೂತ್ರ ಕುಡಿಸಿದ್ದರು. ಈ ಶಾಕಿಂಗ್ ವಿಡಿಯೋವನ್ನು ಸೂರತ್ ಬಿಜೆಪಿಯ ಜನರಲ್ ಸೆಕ್ರೆಟರಿ ಕಿಶೋರ್ ಬಿಂದಾಲ್ ಅವರು ಪೋಸ್ಟ್ ಮಾಡಿದ್ದರು.
ದೇಶದಲ್ಲಿ ಕೋವಿಡ್ ಎರಡನೇ ಅಲೆ ಜೋರಾಗಿದೆ. ಕೋವಿಡ್ ಮಟ್ಟಹಾಕಲು ಲಸಿಕಾ ಅಭಿಯಾನವನ್ನೂ ಚುರುಕುಗೊಳಿಸಲಾಗಿದೆ. ಇಂದಿನಿಂದ ಮೂರನೇ ಹಂತದ ಲಸಿಕಾ ಅಭಿಯಾನ ಶುರುವಾಗಲಿದ್ದು, 18 ರಿಂದ 45 ವಯೋಮಾನದವರಿಗೆಲ್ಲ ಲಸಿಕೆ ನೀಡಲಾಗುತ್ತಿದೆ.
ಭಾರತದಲ್ಲಿ ಪ್ರತಿನಿತ್ಯ ನಾಲ್ಕು ಲಕ್ಷಕ್ಕೂ ಹೆಚ್ಚು ಕೋವಿಡ್ ಪ್ರಕರಣ ದಾಖಲಾಗುತ್ತಿವೆ. ಕರ್ನಾಟಕ, ಮಹಾರಾಷ್ಟ್ರ ಹಾಗೂ ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚು ಇದೆ.