ಮುಂಬೈನಲ್ಲಿ ಹೆಚ್ಚಿದ ಕೋವಿಡ್ : ಒಂದೇ ದಿನ 8,832 ಪ್ರಕರಣ ಪತ್ತೆ
Team Udayavani, Apr 2, 2021, 9:24 PM IST
ಮುಂಬೈ: ಈಗಾಗಲೇ ಕೋವಿಡ್ 19 ಎರಡನೇ ಅಲೆಯಲ್ಲಿ ಸಿಲುಕಿರುವ ಮಹಾರಾಷ್ಟ್ರದಲ್ಲಿ ಇಂದು ಕೋವಿಡ್ ಪ್ರಕರಣಗಳ ಸ್ಫೋಟವಾಗಿದೆ. ಮುಂಬೈ ನಗರವೊಂದರಲ್ಲೇ ಒಂದೇ ದಿನ 8,832 ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಎಲ್ಲರನ್ನು ಬೆಚ್ಚಿ ಬೀಳಿಸಿದೆ.
ಕಳೆದ 24 ಗಂಟೆಗಳಲ್ಲಿ 8,832 ಕೋವಿಡ್-19 ಪ್ರಕರಣಗಳು ವರದಿಯಾಗಿದ್ದರೆ, 5,352 ಮಂದಿ ಗುಣಮುಖರಾಗಿದ್ದಾರೆ. 20 ಮಂದಿ ಕೋವಿಡ್-19 ನಿಂದ ಮೃತಪಟ್ಟಿದ್ದಾರೆ ಎಂದು ಬಿಎಂಸಿ ನೀಡಿರುವ ಅಂಕಿ-ಅಂಶಗಳ ಮೂಲಕ ತಿಳಿದುಬಂದಿದೆ. ಇನ್ನು ಗುರುವಾರದಂದು ಮುಂಬೈ ನಲ್ಲಿ 8,646 ಹೊಸ ಪ್ರಕರಣಗಳು ವರದಿಯಾಗಿದ್ದವು.
ಇನ್ನು ದಿನದಿದಂದ ದಿನಕ್ಕೆ ಮಹರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿವೆ. ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ತಡೆಗಟ್ಟಲು ಮಹಾರಾಷ್ಟ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಕೆಲವೊಂದು ನಗರಗಳಲ್ಲಿ ಲಾಕ್ ಡೌನ್ ಜಾರಿ ಮಾಡಿದೆ.