ಗುಣಮುಖ ಪ್ರಮಾಣ ಶೇ. 97.43
Team Udayavani, Sep 5, 2021, 7:00 AM IST
ಹೊಸದಿಲ್ಲಿ: ಶುಕ್ರವಾರ ಬೆಳಗ್ಗೆಯಿಂದ ಶನಿವಾರ ಬೆಳಗ್ಗೆಯವರೆಗೆ ದೇಶದಲ್ಲಿ 42,618 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿ ದ್ದಾರೆ. ಈ ಮೂಲಕ, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,29,45, 907ಕ್ಕೇರಿದೆ. ಇದೇ ಅವಧಿಯಲ್ಲಿ 330 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಆದರೆ ಗುಣಮುಖ ರಾಗುತ್ತಿರುವವರ ಪ್ರಮಾಣ ಶೇ. 97.43ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದೇ ಅವಧಿಯಲ್ಲಿ ದೇಶಾದ್ಯಂತ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 5,903 ಕ್ಕೇರಿದೆ. ಆದರೆ ದಿನಂಪ್ರತಿ ಪಾಸಿಟಿವಿಟಿ ರೇಟ್ ಶೇ. 2.50ರಷ್ಟಿದ್ದು, ಇದು ಕಳೆದ 71 ದಿನಗಳಲ್ಲೇ ಅತೀ ಕಡಿಮೆ ಎಂದು ಇಲಾಖೆ ತಿಳಿಸಿದೆ. ಈ ನಡುವೆ, ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶದ 24 ಗಂಟೆಗಳಲ್ಲಿ 19 ಜಿಲ್ಲೆಗಳಲ್ಲಿ ಕೇವಲ 36 ಪ್ರಕರಣಗಳು ಪತ್ತೆಯಾಗಿವೆ.
ಡೆಂಗ್ಯೂಗೆ 60 ಬಲಿ :
ಉತ್ತರ ಪ್ರದೇಶದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನ ದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 10 ದಿನಗಳಲ್ಲಿ 60 ಮಂದಿ ಡೆಂಗ್ಯೂಗೆ ಬಲಿಯಾಗಿದ್ದಾರೆ. ಅದರಲ್ಲಿ 50 ಮಂದಿ ಫಿರೋಜಾಬಾದ್ನಲ್ಲೇ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಫಿರೋಜಾಬಾದ್ನಲ್ಲಿ ಸಾವನ್ನಪ್ಪಿದವರಲ್ಲಿ 40 ಮಕ್ಕಳಿದ್ದಾರೆ. ಅಲ್ಲಿ 200 ಜನರ ಸ್ಯಾಂಪಲ್ಗಳನ್ನು ಪರೀಕ್ಷೆ ಮಾಡಲಾಗಿದ್ದು ಅದರಲ್ಲಿ ಶೇ. 50ರಷ್ಟು ಮಂದಿಯಲ್ಲಿ ಡೆಂಗ್ಯೂ ದೃಢವಾಗಿದೆ. ಜಿಲ್ಲೆಯಲ್ಲಿ ಹೆಮರಾಜಿಕ್ ಡೆಂಗ್ಯೂ ಪ್ರಕರಣಗಳು ಹೆಚ್ಚಿವೆ. ಇದರಿಂದಾಗಿ ಹೆಚ್ಚಾಗಿ 10 ವರ್ಷದೊಳಗಿನ ಮಕ್ಕಳು ಬಳಲುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್