ಸಹಾಯ ಮಾಡುವ ಸ್ವಭಾವದವಳು: ಪತ್ನಿ ಪರ ಜಡೇಜಾ ಭರ್ಜರಿ ಪ್ರಚಾರ
ಮೋದಿಯವರ ಮಾರ್ಗವನ್ನು ಅನುಸರಿಸಲು ಬಯಸುತ್ತಾಳೆ...
Team Udayavani, Nov 14, 2022, 3:11 PM IST
ಜಾಮ್ನಗರ : ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಅವರು ಸೋಮವಾರ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಗುಜರಾತ್ ಚುನಾವಣೆಯಲ್ಲಿ ರಿವಾಬಾ ಜಡೇಜಾ ಜಾಮ್ನಗರ ಉತ್ತರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ನಾಮಪತ್ರ ಸಲ್ಲಿಸುವ ಮುನ್ನ ಆಯೋಜಿಸಲಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದರು. ಈ ವೇಳೆ ಮಾತನಾಡಿದ ರವೀಂದ್ರ ಜಡೇಜಾ ”ಇದು ಇವಳು ಮೊದಲ ಬಾರಿಗೆ ಎದುರಿಸುತ್ತಿರುವ ಚುನಾವಣೆ. ಅವಳು ಬಹಳಷ್ಟು ಕಲಿಯುವುದಿದೆ, ಇದರಲ್ಲಿ ಪ್ರಗತಿ ಹೊಂದುತ್ತಾಳೆ ಎಂದು ನಾನು ಭಾವಿಸುತ್ತೇನೆ” ಎಂದರು.
”ರಿವಾಬಾ ಸಹಾಯ ಮಾಡುವ ಸ್ವಭಾವದವಳು ಮತ್ತು ಯಾವಾಗಲೂ ಜನರಿಗೆ ಸಹಾಯ ಮಾಡಲು ಬಯಸುತ್ತಾಳೆ. ಆದ್ದರಿಂದ ರಾಜಕೀಯಕ್ಕೆ ಬಂದಳು. ಜನರಿಗಾಗಿ ಕೆಲಸ ಮಾಡಲು ಅವಳು ಪ್ರಧಾನಿ ಮೋದಿಯವರ ಮಾರ್ಗವನ್ನು ಅನುಸರಿಸಲು ಬಯಸುತ್ತಾಳೆ” ಎಂದು ಪ್ರಚಾರದ ಸಂದರ್ಭ ಜಡೇಜಾ ಹೇಳಿದ್ದಾರೆ.
ಗುಜರಾತ್ ನಲ್ಲಿ ಚುನಾವಣಾ ಕಣ ರಂಗೇರಿದ್ದು, ಬಿಜೆಪಿ, ಕಾಂಗ್ರೆಸ್, ಆಪ್ ಸೇರಿ ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಭರ್ಜರಿ ಪ್ರಚಾರ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ