5 ವರ್ಷದ ಬಾಲಕಿಯ ಮೇಲೆ 12 ವರ್ಷದ ಬಾಲಕನಿಂದ ರೇಪ್
ಇಬ್ಬರು ಅಪ್ರಾಪ್ತ ವಯಸ್ಕ ಬಾಲಕಿಯರ ಮೇಲೆ 59 ವರ್ಷದ ವ್ಯಕ್ತಿಯಿಂದ ರೇಪ್
Team Udayavani, Jul 11, 2022, 9:43 PM IST
ಬಲ್ಲಿಯಾ (ಯುಪಿ): ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಹದಿಹರೆಯದ ಹುಡುಗನನ್ನು ಸೋಮವಾರ ಬಾಲಾಪರಾಧಿ ಸುಧಾರಣಾ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ಮಧ್ಯಾಹ್ನ ತನ್ನ ಮನೆಯ ಟೆರೇಸ್‌ನಲ್ಲಿ ಐದು ವರ್ಷದ ಬಾಲಕಿಯ ಮೇಲೆ ಆಕೆಯ ನೆರೆಮನೆಯ 12 ವರ್ಷದ ಬಾಲಕ ಅತ್ಯಾಚಾರವೆಸಗಿದ್ದಾನೆ ಎಂದು ಉಭಾನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅವಿನಾಶ್ ಸಿಂಗ್ ಹೇಳಿದ್ದಾರೆ.ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಭಾನುವಾರ ರಾತ್ರಿ ಬಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.ಪೊಲೀಸರು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ.
ಇಬ್ಬರು ಬಾಲಕಿಯರ ಮೇಲೆ ರೇಪ್
ನವದೆಹಲಿ : ಮಿಠಾಯಿ ಮತ್ತು ಆಟಿಕೆಗಳನ್ನು ಖರೀದಿಸಲು ಹಣ ನೀಡಿ ಆಮಿಷವೊಡ್ಡಿದ 59 ವರ್ಷದ ನೆರೆಹೊರೆಯ ವ್ಯಕ್ತಿಯೊಬ್ಬ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ವಾಯುವ್ಯ ದೆಹಲಿಯ ಮಾಡೆಲ್ ಟೌನ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು,ತರಕಾರಿ ವ್ಯಾಪಾರಿಯಾಗಿರುವ ಆರೋಪಿಯನ್ನು ಬಂಧಿಸಲಾಗಿದೆ
ಆರು ಮತ್ತು ಏಳು ವರ್ಷ ವಯಸ್ಸಿನ ಇಬ್ಬರು ಹುಡುಗಿಯರು ನೆರೆಹೊರೆಯವರಾಗಿದ್ದು, ಆಗಾಗ್ಗೆ ತಮ್ಮ ನಿವಾಸದ ಹೊರಗೆ ಒಟ್ಟಿಗೆ ಆಟವಾಡುತ್ತಿದ್ದರು, ಅವರ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಇಬ್ಬರ ತಾಯಂದಿರು ಶನಿವಾರ ಪೊಲೀಸರಿಗೆ ದೂರು ನೀಡಿದಾಗ ವಿಷಯ ಬೆಳಕಿಗೆ ಬಂದಿದ್ದು, ಕೃತ್ಯ ಎಸಗಿದ ಬಳಿಕ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯರು ತಮ್ಮ ಮನೆಯ ಹೊರಗೆ ಒಟ್ಟಿಗೆ ಆಟವಾಡುತ್ತಿದ್ದರು ಮತ್ತು ಇದರ ಲಾಭವನ್ನು ಪಡೆದುಕೊಂಡು ಈ ಹಿಂದೆಯೂ ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಇಬ್ಬರೂ ಬಾಲಕಿಯರ ಪೋಷಕರು ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜುಲೈ 9 ರಂದು ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ಕರೆ ಬಂದಿತ್ತು ಎಂದು ಉಪ ಪೊಲೀಸ್ ಆಯುಕ್ತ (ವಾಯುವ್ಯ) ಉಷಾ ರಂಗನಾನಿ ಹೇಳಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ, ಬಾಲಕಿಯರಿಬ್ಬರಿಗೂ ಕೌನ್ಸೆಲಿಂಗ್ ನಡೆಸಲಾಯಿತು. ಸಂತ್ರಸ್ತರ ಹೇಳಿಕೆಗಳನ್ನು ದಾಖಲಿಸಲಾಗಿದೆ ಮತ್ತು ಅವರ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗಿದೆ ಎಂದು ಅಧಿಕಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ