ಕಮಲಹಾಸನ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ದೂರು
Team Udayavani, May 14, 2019, 4:49 PM IST
ಹೊಸದಿಲ್ಲಿ: ಹಿಂದು ಧರ್ಮೀಯರ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ನಟ ಕಮಲ ಹಾಸನ್ ವಿರುದ್ಧ ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ನಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ.
ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕರಾಗಿರುವ ಕಮಲ ಹಾಸನ್ ಅರಾವಾಕುರಿಚಿ ವಿಭಾಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ವೇಳೆ ‘ಸ್ವತಂತ್ರ ಭಾರತದ ಮೊದಲ ಹಿಂದು ಉಗ್ರ ನಾಥುರಾಮ್ ಗೋಡ್ಸೆ’ ಎಂದು ಹೇಳಿಕೆ ನೀಡಿದ್ದರು.
ಕಮಲ ಹಾಸನ್ ಹೇಳಿಕೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಹಿಂದುಗಳ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಸಹಿತ ವಿವಿಧ ಸಂಘಟನೆಗಳು ಆಗ್ರಹಿಸಿದ್ದವು.
ಮಂಗಳವಾರ ಕಮಲಹಾಸನ್ ಅವರ ಚೆನ್ನೈ ನಿವಾಸದ ಭದ್ರತೆಯನ್ನು ಇನ್ನಷ್ಟು ಬಿಗಿ ಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು