ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ ಸಿಆರ್ ಪಿಎಫ್ ಯೋಧ: ನಾಲ್ವರು ಸಾವು, ಮೂವರಿಗೆ ಗಾಯ
Team Udayavani, Nov 8, 2021, 8:49 AM IST
ಸುಕ್ಮಾ: ಸಿಆರ್ ಪಿಎಫ್ ಜವಾನರೊಬ್ಬರು ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದು, ನಾಲ್ವರು ಸಾವನ್ನಪ್ಪಿ, ಮೂರು ಮಂದಿ ಗಾಯಗೊಂಡ ಘಟನೆ ಸೋಮವಾರ ಛತ್ತೀಸ್ಗಢದ ಸುಕ್ಮಾ ಜಿಲ್ಲೆಯ ಅರೆಸೇನಾ ಪಡೆಯ ಶಿಬಿರದಲ್ಲಿ ನಡೆದಿದೆ.
ರಾಜ್ಯದ ರಾಜಧಾನಿ ರಾಯಪುರದಿಂದ ಸುಮಾರು 400 ಕಿಮೀ ದೂರದಲ್ಲಿರುವ ಜಿಲ್ಲೆಯ ಲಿಂಗಂಪಲ್ಲಿ ಗ್ರಾಮದ ಸಿಆರ್ಪಿಎಫ್ನ 50ನೇ ಬೆಟಾಲಿಯನ್ನ ಶಿಬಿರದಲ್ಲಿ ಮುಂಜಾನೆ 3.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿ ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಒಬ್ಬ ಯೋಧ ತನ್ನ ಎಕೆ-47 ರೈಫಲ್ ನಿಂದ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ:ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಪದ್ಮವಿಭೂಷಣ,ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಇಂದು ಪ್ರದಾನ
ಕೂಡಲೇ ಜವಾನನನ್ನು ಬಂಧಿಸಲಾಗಿದ್ದು, ಆತನ ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಗಾಯಗೊಂಡ ಸಿಬ್ಬಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ