ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ಇಳಿಕೆ
Team Udayavani, Mar 11, 2020, 5:47 PM IST
ಹೊಸದಿಲ್ಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯಲ್ಲಿ ಭಾರಿ ಇಳಿಕೆ ಆಗಿದ್ದರಿಂದ ಅದರ ಲಾಭ ದೇಶದ ಜನರಿಗೆ ಸಿಕ್ಕಿದೆ. ಪೆಟ್ರೋಲ್ ,ಡಿಸೇಲ್ ಬೆಲೆಯಲ್ಲಿ ಭಾರಿ ಇಳಿಕೆ ಆಗಿದೆ. ಪೆಟ್ರೋಲ್ ಬೆಲೆ ಲೀಟರ್ಗೆ 2.69 ರೂ ಇಳಿಕೆ ಆಗಿದೆ. ಇನ್ನು ಡೀಸೆಲ್ ಬೆಲೆಯಲ್ಲೂ 2ರೂ. 33 ಪೈಸೆ ಇಳಿಕೆಯಾಗಿದೆ.
ರಾಷ್ಟ್ರ ರಾಜಧಾನಿಯಲ್ಲಿ ಈಗ ಒಂದು ಲೀಟರ್ ಪೆಟ್ರೋಲ…ಗೆ 70.29 ರೂ ಇದ್ದು, ಡೀಸೆಲ್ ಬೆಲೆ 63 ರೂ ಆಗಿದೆ. ಮಂಗಳವಾರ ದೆಹಲಿಯಲ್ಲಿ ಲೀಟರ್ ಪೆಟ್ರೋಲ…ಗೆ 72.98 ರೂ ದರವಿತ್ತು. ಡೀಸೆಲ್ 65.34 ರೂ. ನಂತೆ ಮಾರಾಟವಾಗುತ್ತಿತ್ತು. ಬೆಂಗಳೂರಿನಲ್ಲಿ ಪೆಟ್ರೋಲ್ 72.70 ರೂ. ಪ್ರತಿ ಲೀ. ಮತ್ತು ಪ್ರತಿ ಲೀ ಡೀಸೆಲ್ಗೆ 65.16 ರೂ. ಆಗಲಿದೆ. ಇದೇ ವೇಳೆ ಡಾಲರ್ ಎದುರು ರೂಪಾಯಿ ತನ್ನ ಮೌಲ್ಯವನ್ನ ಹೆಚ್ಚಿಸಿಕೊಂಡಿದೆ. 74ರ ಆಸುಪಾಸಿನಲ್ಲಿದ್ದ ರೂಪಾಯಿ ಇಂದು 71ರೂ.ಗೆ ತನ್ನ ಮೌಲ್ಯ ಹೆಚ್ಚಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ