ಪಿಜಿ ಪ್ರವೇಶಕ್ಕೂ ಸಿಯುಇಟಿ ಪರೀಕ್ಷೆ : ಈ ವರ್ಷದಿಂದಲೇ ಜಾರಿ
Team Udayavani, May 20, 2022, 7:10 AM IST
ಹೊಸದಿಲ್ಲಿ : ಕೇವಲ ಯುಜಿ ಕೋರ್ಸ್‌ಗಳಿಗೆ ಮಾತ್ರವಲ್ಲ, ಪಿಜಿ ಕೋರ್ಸ್‌ಗಳಿಗೂ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಪ್ರವೇಶ ಪರೀಕ್ಷೆ ಕಡ್ಡಾಯವಾಗಲಿದೆ.
ಸ್ನಾತಕೋತ್ತರ ಕೋರ್ಸ್‌ಗಳಿಗೆ ಕೂಡ ಸಾಮಾನ್ಯ ವಿಶ್ವವಿದ್ಯಾನಿಲಯ ಪ್ರವೇಶ ಪರೀಕ್ಷೆ(ಸಿಯುಇಟಿ)ಯನ್ನು ಈ ವರ್ಷವೇ ಪರಿಚಯಿಸಲು ವಿಶ್ವ ವಿದ್ಯಾನಿಲಯಗಳ ಧನಸಹಾಯ ಆಯೋಗ(ಯುಜಿಸಿ) ನಿರ್ಧರಿಸಿದೆ.
45 ಕೇಂದ್ರೀಯ ವಿಶ್ವವಿದ್ಯಾನಿಲಯ ಗಳಿಗೆ ಪ್ರವೇಶ ಪಡೆಯಬೇಕೆಂದರೆ ಸಿಯುಇಟಿ ಪರೀಕ್ಷೆಯ ಅಂಕಗಳನ್ನು ಪರಿಗಣಿಸಲಾಗುತ್ತದೆಯೇ ವಿನಾ 12ನೇ ತರಗತಿಯ ಅಂಕಗಳನ್ನಲ್ಲ ಎಂದೂ, ಕೇಂದ್ರೀಯ ವಿವಿಗಳು ತಮ್ಮ ಕನಿಷ್ಠ ಅರ್ಹತಾ ಮಾನದಂಡವನ್ನು ತಾವೇ ನಿಗದಿಪಡಿಸಬಹುದು ಎಂದೂ ಇತ್ತೀಚೆಗಷ್ಟೇ ಯುಜಿಸಿ ಅಧ್ಯಕ್ಷ ಜಗದೇಶ್ ಕುಮಾರ್ ಸ್ಪಷ್ಟಪಡಿಸಿದ್ದರು.
ಇದರ ಬೆನ್ನಲ್ಲೇ ಈಗ ಪಿಜಿ ಪ್ರವೇಶಕ್ಕೂ ಸಿಯುಇಟಿ ಪರೀಕ್ಷೆಯನ್ನು ಈ ವರ್ಷದಿಂದಲೇ ಆರಂಭಿಸುವುದಾಗಿ ಹೇಳಿದ್ದಾರೆ. 2022ರ ಶೈಕ್ಷಣಿಕ ವರ್ಷದಿಂದಲೇ ಇದು ಜಾರಿಯಾಗಲಿದೆ. ಜುಲೈ ಮೂರನೇ ವಾರದಲ್ಲಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವೇ ಈ ಪರೀಕ್ಷೆ ನಡೆಸಲಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಗುರುವಾರವೇ ಆರಂಭವಾಗಿದ್ದು, ಜೂ.18ರವರೆಗೆ ನಡೆಯಲಿದೆ. ಕಂಪ್ಯೂಟರ್ ಆಧರಿತ ಪರೀಕ್ಷೆ(ಸಿಬಿಟಿ) ಮಾದರಿಯಲ್ಲಿ ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಪರೀಕ್ಷೆ ನಡೆಸಲಾಗುವುದು ಎಂದೂ ಜಗದೇಶ್ ತಿಳಿಸಿದ್ದಾರೆ.
ಈಗಾಗಲೇ ಸಿಯುಇಟಿ-ಯುಜಿ ಪರೀಕ್ಷೆಗೆ 10.46 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಯುಜಿ ಪ್ರವೇಶ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಮೇ 22 ಕೊನೆಯ ದಿನಾಂಕವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ಹೊಸ ಸೇರ್ಪಡೆ
ಟಿ20 ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್, ಮಳೆ ಅಡಚಣೆ, ಉಮ್ರಾನ್ ಮಲಿಕ್ ಪದಾರ್ಪಣೆ
ವಿಂಬಲ್ಡನ್ ಗ್ರ್ಯಾನ್ಸ್ಲಾಂ ಟೆನಿಸ್ ಟೂರ್ನಿ: ವೀನಸ್ ದಾಖಲೆ ಮುರಿಯುವತ್ತ ಸ್ವಿಯಾಟೆಕ್
ಮಾರುತಿ ಸುಜುಕಿ ಸಂಸ್ಥೆಯ ಆಡಳಿತ ನಿರ್ದೇಶಕರಾಗಿದ್ದ ಡಾ| ವೆಂಕಟರಾಮನ್ ಇನ್ನಿಲ್ಲ
ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ಹುಣಸೂರು : ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಬೈಕ್ : ಸವಾರ ಸ್ಥಳದಲ್ಲೇ ಸಾವು