ಮೋಚಾ ಭೀತಿ ಬಾಂಗ್ಲಾದಲ್ಲಿ ಹೈ ಅಲರ್ಟ್: ಲಕ್ಷಾಂತರ ಜನರಿಗೆ ಸ್ಥಳಾಂತರಕ್ಕೆ ಸೂಚನೆ
Team Udayavani, May 14, 2023, 7:40 AM IST
ಢಾಕಾ: ಬಾಂಗ್ಲಾದೇಶದಲ್ಲಿ ತೀವ್ರ ಅಪಾಯಕಾರಿ ಮಟ್ಟದಲ್ಲಿ ಮೋಚಾ ಚಂಡಮಾರುತ ಅಪ್ಪಳಿಸುವ ಭೀತಿ ಎದುರಾಗಿರುವ ಹಿನ್ನೆಲೆ ದೇಶದ ಆಗ್ನೇಯ ಕರಾವಳಿ ಭಾಗದ ಲಕ್ಷಾಂತರ ಜನರಿಗೆ ಸ್ಥಳಾಂತರಗೊಳ್ಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಬಾಂಗ್ಲಾದೇಶ-ಮ್ಯಾನ್ಮಾರ್ ಭಾಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ, ವಿಶ್ವದ ಅತೀದೊಡ್ಡ ರೋಹಿಂಗ್ಯಾ ನಿರಾಶ್ರಿತ ಶಿಬಿರಿವಿರುವ ಪ್ರದೇಶಗಳಲ್ಲಿನ ಲಕ್ಷಾಂತರ ಮಂದಿಯ ಸ್ಥಳಾಂತರಕ್ಕೆ ಯೋಜನೆ ರೂಪಿಸಲಾಗಿದೆ ಎಂದು ವಿಪತ್ತು ನಿರ್ವಹಣ ತಂಡದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗಂಟೆಗೆ 175 ಕಿ.ಮೀ.ವೇಗದಲ್ಲಿ ಗಾಳಿ ಬೀಸುತ್ತಿದ್ದು, ತೀವ್ರತರದಲ್ಲಿ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಭಾರತದ ಅಂಡಮಾನ್ ನಿಕೋಬಾರ್, ಮಿಜೋರಾಂ, ತ್ರಿಪುರಾ, ನಾಗಾ ಲ್ಯಾಂಡ್, ಮಣಿಪುರ, ಅಸ್ಸಾಂ, ಒಡಿಶಾ ಹಾಗೂ ಪಶ್ಚಿಮ ಬಂಗಾಲದಲ್ಲೂ ತೀವ್ರ ಮಳೆಯಾಗುವ ಸಾಧ್ಯತೆಗಳಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು