2 ತಿಂಗಳಲ್ಲೇ ಅತೀ ಕಡಿಮೆ ಕೋವಿಡ್ ಪ್ರಕರಣಗಳು ಪತ್ತೆ: 24ಗಂಟೆಯಲ್ಲಿ 1,89,232 ಮಂದಿ ಗುಣಮುಖ
Team Udayavani, Jun 6, 2021, 10:34 AM IST
ಹೊಸದಿಲ್ಲಿ: ದೇಶದಲ್ಲಿ ಸದ್ಯ ಪ್ರತಿ ದಿನ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಕಾಣುತ್ತಿದೆ. ಕಳೆದ 24 ಗಂಟೆಯ ವರದಿಯನ್ನು ಆರೋಗ್ಯ ಇಲಾಖೆ ನೀಡಿದ್ದು, ಕಳೆದ ಎರಡು ತಿಂಗಳ ಅವಧಿಯಲ್ಲೇ ಕಡಿಮೆ ಸೋಂಕಿತರ ಸಂಖ್ಯೆ ಈ ಅವಧಿಯಲ್ಲಿ ಪತ್ತೆಯಾಗಿದೆ.
ದೇಶದಲ್ಲಿ 1,14,460 ಹೊಸ ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಈ ಅವಧಿಯಲ್ಲಿ 1,89,232 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2677 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ತಿಳಿಸಿದೆ.
ದೇಶದ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 2,88,09,339ಕ್ಕೆ ಏರಿಕೆಯಾಗಿದೆ. ಇದುವರೆಗೆ 2,69,84,781ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 14,77,799 ಸಕ್ರಿಯ ಪ್ರಕರಣಗಳಿವೆ. 3,46,759 ಮಂದಿ ಸೋಂಕಿತರು ಇದುವರೆಗೆ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ಚಿಕ್ಕಮಗಳೂರಿನ ಕೋವಿಡ್ ಕೇರ್ ಸೆಂಟರ್ ನಲ್ಲಿ ಅಧಿಕಾರಿಗಳ ಸಖತ್ ಡ್ಯಾನ್ಸ್
ಶನಿವಾರ ಸುಮಾರು 20 ಲಕ್ಷ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಅದರಲ್ಲಿ 1,14,460 ಮಂದಿಗೆ ಕೋವಿಡ್ ದೃಡವಾಗಿದೆ. ದೈನಂದಿನ ಪಾಸಿಟಿವಿಟಿ ದರ 5.62ಕ್ಕೆ ಇಳಿಕೆಯಾಗಿದೆ.